ಬೆಳಗಾವಿ :
ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ನವೆಂಬರ್ 28 ರಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಕ್ರೆಡಿಟ್ ಆಕ್ಸೆಸ್ ಗ್ರಾಮೀಣ ಲಿಮಿಟೆಡ್ ಪ್ಲಾಟ್ ನಂಬರ್ 9 ಸಿಎಸ್ #1837, ಬಸವ ಕಾಲೋನಿ ವೈಭವ ನಗರ ಬೆಳಗಾವಿ ಇಲ್ಲಿ ನೇರ ಸಂದರ್ಶನವನ್ನು ಆಯೋಜಿಸಲಾಗಿದೆ. ಎಸ್.ಎಸ್.ಎಲ್.ಸಿ, ಪಿಯುಸಿ, ಐಟಿಐ ಮತ್ತು ಪದವಿ ವಿದ್ಯಾರ್ಹತೆ ಹೊಂದಿರುವ ಆಸಕ್ತ ಪುರುಷ/ಮಹಿಳಾ ಅಭ್ಯರ್ಥಿಗಳು https://tinyurl.com/2f6utajp ಈ ವೆಬ್‌ ಸೈಟ್‌ ನಲ್ಲಿ ಹೆಸರನ್ನು ನೋಂದಾಯಿಸಿಕೊಳ್ಳಬಹುದಾಗಿದೆ. ಅಭ್ಯರ್ಥಿಗಳಿಗೆ ಉದ್ಯೋಗಾವಕಾಶವು ಉಚಿತವಾಗಿದ್ದು, ಇನ್ನುಳಿದ ಯಾವುದೇ ಸೌಲಭ್ಯಗಳು ಇರುವುದಿಲ್ಲ.
ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಳಿಗಾಗಿ ಮೊಬೈಲ್ ಸಂಖ್ಯೆ: 7975856566, ಇವರನ್ನು ಕಚೇರಿ ಸಮಯದಲ್ಲಿ ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಎಂದು ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.