ಬೆಂಗಳೂರು :
ಮುಖ್ಯ ಕಾರ್ಯದರ್ಶಿ ಹುದ್ದೆಗೆ ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್‌ ಗೋಯೆಲ್‌ ಅವರು ನೇಮಕಗೊಂಡಿರುವ ಹಿನ್ನೆಲೆಯಲ್ಲಿ, ಅವರಿಂದ ತೆರವಾಗುವ ಹುದ್ದೆಗೆ ಎಲ್‌.ಕೆ. ಅತೀಕ್‌ ಅವರನ್ನು ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ಹಣಕಾಸು ಇಲಾಖೆಯ ಹೆಚ್ಚುವರಿ ಪ್ರಭಾರವನ್ನೂ ಇವರಿಗೆ ವಹಿಸಿ ಆದೇಶಿಸಲಾಗಿದೆ.