ಬೆಂಗಳೂರು: ಮಾ. 9ರಂದು ನಿಗದಿಯಾಗಿದ್ದ
ಪ್ರಸಕ್ತ ವರ್ಷದ ಮೊದಲ ರಾಷ್ಟ್ರೀಯ ಲೋಕ ಅದಾಲತ್ ಅನ್ನು ಮಾ.16ಕ್ಕೆ ಮುಂದೂಡಲಾಗಿದೆ ಎಂದು ಕೆಎಎಲ್ ಎಸ್‌ಎ ಸದಸ್ಯ ಕಾರ್ಯದರ್ಶಿ ಜೈಶಂಕರ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮಾ.16ರಂದು ನಡೆಯಲಿರುವ ಲೋಕ ಅದಾಲತ್‌ನಲ್ಲಿ ನ್ಯಾಯಾಲಯದಲ್ಲಿ ಬಾಕಿಯಿರುವ ಹಾಗೂ ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಪಕ್ಷಗಾರರ ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಲಾಗುತ್ತದೆ. ಎನ್‌ಐ ಕಾಯ್ದೆ ಅಡಿ ಪ್ರಕರಣಗಳು, ಬ್ಯಾಂಕ್ ಮತ್ತು ವಾಣಿಜ್ಯ ದಾವೆಗಳಿಗೆ ವಿಶೇಷ ಆದ್ಯತೆ ನೀಡುವಂತೆ ಕಾರ್ಯದರ್ಶಿಗಳು ಸೂಚಿಸಿದ್ದಾರೆ.