ನವದೆಹಲಿ : ಬಿಜೆಪಿ ರಾಷ್ಟ್ರೀಯ ಸಮಾವೇಶವು ಇಂದು (ಫೆಬ್ರವರಿ 17) ಮತ್ತು ನಾಳೆ (ಫೆಬ್ರವರಿ 18) ದೆಹಲಿಯಲ್ಲಿ ನಡೆಯಲಿದೆ. ಬೆಳಗ್ಗೆ 10 ಗಂಟೆಗೆ ಪಕ್ಷದ ರಾಷ್ಟ್ರೀಯ ಪದಾಧಿಕಾರಿಗಳ ಸಭೆ ನಡೆಯಲಿದೆ. ಮಧ್ಯಾಹ್ನ 3 ಗಂಟೆಗೆ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಧ್ವಜಾರೋಹಣ ಮಾಡುವ ಮೂಲಕ ರಾಷ್ಟ್ರೀಯ ಸಮಾವೇಶಕ್ಕೆ ಚಾಲನೆ ನೀಡಲಿದ್ದಾರೆ. ಎರಡು ದಿನಗಳ ಸಮಾವೇಶದ ಎರಡೂ ದಿನ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಅಭಿವೃದ್ಧಿ ಹೊಂದಿದ ಭಾರತ’ ನಿರ್ಣಯವನ್ನು ಸಮಾವೇಶದ ಸ್ಥಳದಲ್ಲಿ ಪ್ರದರ್ಶನದ ಮೂಲಕ ಪ್ರಸ್ತುತಪಡಿಸಲಾಗುತ್ತದೆ.

ಬಿಜೆಪಿ ಆಡಳಿತವಿರುವ ರಾಜ್ಯಗಳ ಸಚಿವರು, ಅಧಿಕಾರಿಗಳು, ರಾಷ್ಟ್ರೀಯ ಪರಿಷತ್ತಿನ ಸದಸ್ಯರು, ಲೋಕಸಭೆ ಮತ್ತು ರಾಜ್ಯಸಭೆಯ ಹಾಲಿ ಮತ್ತು ಮಾಜಿ ಸದಸ್ಯರು, ಶಾಸಕರು, ವಿಧಾನ ಪರಿಷತ್‌ ಸದಸ್ಯರು, ಮಾಜಿ ರಾಜ್ಯಾಧ್ಯಕ್ಷರು, ಲೋಕಸಭಾ ಕ್ಲಸ್ಟರ್‌ನ ಉಸ್ತುವಾರಿಗಳು ಮತು ಸಂಯೋಜಕರು ಪಕ್ಷದ ನಾಯಕರು ಭಾಗವಹಿಸಲಿದ್ದಾರೆ.

ಅಭಿವೃದ್ಧಿ ಮತ್ತು ಕಲ್ಯಾಣ ಯೋಜನೆಗಳ ಬಗ್ಗೆ ಮಾಹಿತಿ ನೀಡಲಾಗುವುದು. ಅಲ್ಲದೇ ಮುಂದಿನ ಲೋಕಸಭೆ ಚುನಾವಣೆ ಬಗ್ಗೆಯೂ ಸಭೆಯಲ್ಲಿ ರಣತಂತ್ರ ರೂಪಿಸಲಾಗುವುದು. ಲೋಕಸಭೆ ಚುನಾವಣೆಯಲ್ಲಿ ಪ್ರಚಂಡ ಬಹುಮತ ಅಥವಾ ದಾಖಲೆಯ ಗೆಲುವಿನ ಅಂತರವನ್ನು ಸಾಧಿಸಲು ಏನೇನು ತಂತ್ರಗಾರಿಕೆ ಹೆಣೆಯಬೇಕು ಎಂಬ ಬಗ್ಗೆ ಸಭೆಯಲ್ಲಿ ಪ್ರಮುಖವಾಗಿ ಚರ್ಚೆಯಾಗಬಹುದು. ಅಯೋಧ್ಯೆ ರಾಮ ಮಂದಿರ ಉದ್ಘಾಟನೆಯಾದ ವಿಚಾರದಲ್ಲಿಯೂ ಬಿಜೆಪಿ ಸಭೆಯಲ್ಲಿ ಸಂಭ್ರಮ ಆಚರಿಸಲಿದೆ ಎನ್ನಲಾಗಿದೆ.