ಬೆಳಗಾವಿ/ಬೆಂಗಳೂರು :
ನನಗೆ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಆಸಕ್ತಿ ಇಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದ್ದಾರೆ.
ನನಗೆ ಬೆಳಗಾವಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಆಸಕ್ತಿ ಇಲ್ಲ. ನಮ್ಮ ಪಕ್ಷದ ಕಾರ್ಯಕರ್ತರಿಗೆ ಈ ಬಾರಿ ಅವಕಾಶ ಸಿಗಲಿದೆ ಎಂದು ಬೆಂಗಳೂರಿನಲ್ಲಿಂದು ಮಹತ್ವದ ಹೇಳಿಕೆ ನೀಡಿದ್ದಾರೆ.
ಬೆಳಗಾವಿ, ಚಿಕ್ಕೋಡಿ ಎರಡು ಲೋಕಸಭಾ ಕ್ಷೇತ್ರದಲ್ಲೂ ನಾನು, ನಮ್ಮ ಕುಟುಂಬದ ಸದಸ್ಯರು ಯಾರೂ ಸ್ಪರ್ಧಿಸುವುದಿಲ್ಲ. ಈ ಬಾರಿ ಪಕ್ಷದ ಕಾರ್ಯಕರ್ತರಿಗೆ ಅವಕಾಶ ಸಿಗಲಿದೆ. ಈ ಬಗ್ಗೆ ಹೈಕಮಾಂಡ್ ಏನು ಹೇಳುತ್ತದೋ ನೋಡೋಣ ಎಂದು ಹೇಳಿದರು.
ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಸಚಿವ ಸತೀಶ ಜಾರಕಿಹೊಳಿ, ಬೆಳಗಾವಿ ಲೋಕಸಭಾ ಚುನಾವಣೆಗೆ ನಾನು, ನನ್ನ ಕುಟುಂಬದವರು ಸ್ಪರ್ಧಿಸುವುದಿಲ್ಲ. ಪಕ್ಷದ ಕಾರ್ಯಕರ್ತರಿಗೆ ಟಿಕೆಟ್ ಸಿಗುವ ಭರವಸೆ ಹೊರ ಹಾಕಿದ್ದಾರೆ.
ಕಡಿಮೆ ಅಂತರದಿಂದ ಸೋತಿದ್ದರು :
ಮೂರು ವರ್ಷಗಳ ಹಿಂದೆ ಬೆಳಗಾವಿ ಸಂಸದರಾಗಿದ್ದ ಸುರೇಶ ಅಂಗಡಿ ಅಕಾಲಿಕ ನಿಧನದಿಂದ ತೆರವಾಗಿದ್ದ ಉಪಚುನಾವಣೆಗೆ ಕಾಂಗ್ರೆಸ್ ಟಿಕೆಟ್ ನಿಂದ ಸತೀಶ ಜಾರಕಿಹೊಳಿ ಸ್ಪರ್ಧಿಸಿ ಕಡಿಮೆ ಅಂತರದಿಂದ ಸೋಲು ಕಂಡಿದ್ದರು.