ನವದೆಹಲಿ: 18ನೇ ಲೋಕಸಭೆಯ ಮೊದಲ ಅಧಿವೇಶನ ಜೂನ್ 24 ರಿಂದ ಜುಲೈ 3ರವರೆಗೆ ನಡೆಯಲಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಬುಧವಾರ ತಿಳಿಸಿದ್ದಾರೆ.
ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ’18ನೇ ಲೋಕಸಭೆಯ ಮೊದಲ ಅಧಿವೇಶನ ಜೂನ್ 24 ರಿಂದ ಜುಲೈ 3 ರವರೆಗೆ ನಡೆಯಲಿದೆ. ಹೊಸದಾಗಿ ಚುನಾಯಿತ ಸದಸ್ಯರ ಪ್ರಮಾಣ ವಚನ ಸ್ವೀಕಾರ ಹಾಗೂ ಸ್ಪೀಕರ್ ಆಯ್ಕೆ ನಡೆಯಲಿದೆ’ ಎಂದು ತಿಳಿಸಿದ್ದಾರೆ.
ರಾಜ್ಯಸಭೆಯ 264 ನೇ ಅಧಿವೇಶನ ಜೂನ್ 27 ರಂದು ಪ್ರಾರಂಭವಾಗಿ ಜುಲೈ 3 ರಂದು ಮುಕ್ತಾಯಗೊಳ್ಳಲಿದೆ ಎಂದು ಮಾಹಿತಿ ನೀಡಿದ್ದಾರೆ.
ರಾಷ್ಟ್ರಕ್ಕೆ ಸೇವೆ ಸಲ್ಲಿಸುವುದು ನಮ್ಮ ‘ಪವಿತ್ರ ಕರ್ತವ್ಯ’. 140 ಕೋಟಿ ಭಾರತೀಯರ ಆಕಾಂಕ್ಷೆಗಳ ಈಡೇರಿಕೆಗೆ ಚರ್ಚೆ ನಡೆಸಲು ಸಂಸತ್ತು ಪರಿಪೂರ್ಣ ವೇದಿಕೆಯಾಗಿದೆ ಎಂದು ರಿಜಿಜು ಹೇಳಿದ್ದಾರೆ.