
ಬೆಳಗಾವಿ: ಕೆಲ ಕಾಲದ ನಂತರ ಬೆಳಗಾವಿಯಲ್ಲಿ ಮತ್ತೆ ಭ್ರಷ್ಟಾಚಾರಿಗಳ ವಿರುದ್ಧ ಲೋಕಾಯುಕ್ತ ಅಧಿಕಾರಿಗಳು ಮಿಂಚಿನ ಕಾರ್ಯಾಚರಣೆ ನಡೆಸಿದ್ದಾರೆ. ಅಕ್ರಮ ಆಸ್ತಿ ಸಂಪಾದನೆ ದೂರಿನ ಮೇಲೆ ಲೋಕಾಯುಕ್ತ ಅಧಿಕಾರಿಗಳು ಶುಕ್ರವಾರ ಬೆಳ್ಳಂಬೆಳಗ್ಗೆ ಸರ್ಕಾರಿ ಅಧಿಕಾರಿಗಳ ನಿವಾಸದ ಮೇಲೆ ದಾಳಿ ನಡೆಸಿದ್ದಾರೆ. ಬೆಳಗಾವಿ ಸಬ್ ರಿಜಿಸ್ಟರ್ ಸಚಿನ್, ರಾಯಬಾಗ ಪಶುವೈದ್ಯ ಅಧಿಕಾರಿ ಸಂಜಯ ಎಂಬುವರ ಮನೆಯ ಮೇಲೆ ದಾಳಿ ನಡೆಸಲಾಗಿದೆ ಎಂದು ಲೋಕಾಯುಕ್ತ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.