ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಸಿ.ಎಲ್. ಆನಂದ ಅವರ ಮನೆ ಮೇಲೆ ಲೋಕಾಯುಕ್ತ ಪೊಲೀಸರು ಶುಕ್ರವಾರ ಬೆಳ್ಳಂ ಬೆಳಗ್ಗೆ ದಾಳಿ ನಡೆಸಿದ್ದಾರೆ. ಒಂದು ವರ್ಷದಿಂದ ಮಂಗಳೂರು ಪಾಲಿಕೆಗೆ ಆಯುಕ್ತರಾಗಿರುವ ಆನಂದ್ ಅವರಿಗೆ ಇತ್ತೀಚಿಗೆ ವರ್ಗಾವಣೆಯಾಗಿದೆ. ಆದರೆ, ಯಾವುದೇ ಹುದ್ದೆ ತೋರಿಸಿರಲಿಲ್ಲ. ಅವರು ಕೆಎಟಿ ಮೊರೆಹೋಗಿ ವರ್ಗಾವಣೆಗೆ ತಡೆಯಾಜ್ಞೆ ತಂದಿದ್ದರು. ಇದರ ಬೆನ್ನಲ್ಲೇ ಇದೀಗ ಮಣ್ಣಗುಡ್ಡೆಯಲ್ಲಿರುವ ಅವರ ಮನೆ ಮೇಲೆ ಲೋಕಾಯುಕ್ತಾ ಪೊಲೀಸರು ದಾಳಿ ನಡೆಸಿದ್ದಾರೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ದೂರು ಬಂದ ಕಾರಣ ಆಯುಕ್ತರ ಮನೆ ಮೇಲೆ ದಾಳಿ ನಡೆಸಲಾಗಿದೆ. ಬೆಂಗಳೂರಿಂದ ಆಗಮಿಸಿರುವ ಲೋಕಾಯುಕ್ತ ಪೊಲೀಸರ ತಂಡ ಆಯುಕ್ತರ ಮನೆ ಹಾಗೂ ಕಚೇರಿ ತಪಾಸಣೆ ನಡೆಸಿದೆ.