ಮುಂಬೈ: ದೇವೇಂದ್ರ ಫಡ್ನವಿಸ್ ಅವರ ನೇತೃತ್ವದಲ್ಲಿ ಮಹಾಯುತಿ ಸರಕಾರ ಇಂದು ಸಂಜೆ ಐದು ಮೂವತ್ತಕ್ಕೆ ಮಹಾರಾಷ್ಟ್ರದಲ್ಲಿ ಮತ್ತೆ ಅಧಿಕಾರಕ್ಕೆ ಬರಲಿದೆ. ಏಕನಾಥ ಶಿಂದೆ ಮತ್ತು ಅಜಿತ್ ಪವಾರ ನೂತನ ಉಪಮುಖ್ಯಮಂತ್ರಿಗಳಾಗಲಿದ್ದಾರೆ.
ಶಿವಸೇನಾ ಅಧ್ಯಕ್ಷ ಏಕನಾಥ ಶಿಂದೆ ಅವರೇ ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಪಕ್ಷದ ನಾಯಕ ಉದಯ ಸಮಂತ್ ಘೋಷಿಸಿದ್ದಾರೆ.
ಬಿಜೆಪಿ ನಾಯಕ ದೇವೇಂದ್ರ ಫಡಣವೀಸ್ ಅವರು ಮುಖ್ಯಮಂತ್ರಿಯಾಗಿ ಇಂದು ಸಂಜೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ವೇಳೆ ಶಿಂದೆ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರು ಉಪಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಹಾಜರಿರಲಿದ್ದಾರೆ ಎಂದು ಉದಯ ಅವರು ಹೇಳಿದ್ದಾರೆ.
ಈ ಹಿಂದಿನ ಮಹಾಯುತಿ ಸರ್ಕಾರದಲ್ಲಿ ಶಿಂದೆ ಅವರು ಮುಖ್ಯಮಂತ್ರಿಯಾಗಿದ್ದ ಕಾರಣ ಈಗ ಬಿಜೆಪಿಗೆ ಅಧಿಕಾರ ನೀಡಲು ಇಚ್ಚಿಸುವುದಿಲ್ಲ ಎನ್ನಲಾಗಿತ್ತು. ಆದರೆ ಈಗ ಶಿಂದೆ ಉಪಮುಖ್ಯಮಂತ್ರಿಯಾಗಲು ಒಪ್ಪಿಕೊಂಡಿದ್ದಾರೆ.