ಬೆಳಗಾವಿ: ಕಾಂಗ್ರೆಸ್ ಪಕ್ಷದ ಪ್ರಭಾವಿ ನಾಯಕ ಮತ್ತು ಸಚಿವ ಸತೀಶ ಜಾರಕಿಹೊಳಿ ಅವರನ್ನು ಉಪಮುಖ್ಯಮಂತ್ರಿ ಮಾಡಬೇಕು ಎಂದು ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕ ಆಸಿಫ್ ಶೇಠ ಆಗ್ರಹಿಸಿದ್ದಾರೆ. ಪತ್ರಕರ್ತರ ಜೊತೆ ಮಾತನಾಡಿದ ಅವರು, ಉತ್ತರ ಕರ್ನಾಟಕ ಅಭಿವೃದ್ಧಿ ಆಗಬೇಕಾದರೆ ಸಚಿವ ಸತೀಶ ಜಾರಕಿಹೊಳಿ ಅವರನ್ನು ಉಪಮುಖ್ಯಮಂತ್ರಿ ಮಾಡಬೇಕು. ಅವರನ್ನು ಉಪಮುಖ್ಯಮಂತ್ರಿ ಮಾಡಲು ಒಂದು ವರ್ಷದಿಂದ ನಾನು ಸರಕಾರ ಮತ್ತು ಹೈಕಮಾಂಡಿಗೆ ಆಗ್ರಹಿಸುತ್ತ ಬಂದಿದ್ದೇನೆ ಎಂದು ಅವರು ಹೇಳಿದರು.