ಬೆಂಗಳೂರು : ಬ್ಯಾಂಕಾಕ್‌ನಿಂದ ಆಗಮಿಸಿದ ಪ್ರಯಾಣಿಕರ ಚೆಕ್-ಇನ್ ಬ್ಯಾಗೇಜ್‌ನಲ್ಲಿ ಬಚ್ಚಿಟ್ಟು ಅಕ್ರಮವಾಗಿ ತಂದಿದ್ದ 10 ಹಳದಿ ಅನಕೊಂಡಗಳನ್ನು ಪತ್ತೆ ಮಾಡಲಾಗಿದ್ದು, ಕಳ್ಳಸಾಗಣೆ ಮಾಡುವ ಯತ್ನವನ್ನು ವಿಫಲಗೊಳಿಸಲಾಗಿದೆ ಎಂದು ಬೆಂಗಳೂರು ಕಸ್ಟಮ್ಸ್ ಹೇಳಿದೆ.
ಬ್ಯಾಂಕಾಕ್​ನಿಂದ ಕೆಐಎ ವಿಮಾನ ನಿಲ್ದಾಣಕ್ಕೆ ಬಂದಿದ್ದ ಪ್ರಯಾಣಿಕರ ಲಗೇಜ್​ಗಳನ್ನು ಕಸ್ಟಮ್ಸ್​ ಅಧಿಕಾರಿಗಳು ತಪಾಸಣೆ ಮಾಡುತ್ತಿದ್ದರು. ಈ ವೇಳೆ ಪ್ರಯಾಣಿಕನೊಬ್ಬನ ಲಗೇಜ್​ ತಪಾಸಣೆ ಮಾಡುವಾಗ 10 ಹಳದಿ ಅನಕೊಂಡ ಪತ್ತೆಯಾಗಿವೆ.
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸೋಮವಾರ ಈ ಘಟನೆ ನಡೆದಿದ್ದು, ಆರೋಪಿಯನ್ನು ತಕ್ಷಣ ಬಂಧಿಸಲಾಗಿದೆ.

ವನ್ಯಜೀವಿ ಕಳ್ಳಸಾಗಣೆ ಹೆಚ್ಚುತ್ತಿರುವ ಸಮಸ್ಯೆಯ ಬಗ್ಗೆ ಗಮನ ಸೆಳೆದಿರುವ ಬೆಂಗಳೂರು ಕಸ್ಟಮ್ಸ್ ಈ ಸುದ್ದಿಯನ್ನು ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ ಎಕ್ಸ್‌ನಲ್ಲಿ ಹಂಚಿಕೊಂಡಿದೆ. ಪ್ರಯಾಣಿಕರನ್ನು ಬಂಧಿಸಲಾಗಿದೆ ಹಾಗೂ ತನಿಖೆ ನಡೆಯುತ್ತಿದೆ ಎಂದು ತಿಳಿಸಲಾಗಿದೆ.
ಕಸ್ಟಮ್ಸ್ ಅಧಿಕಾರಿಗಳು ಹಳದಿ ಬಣ್ಣ ಆನಕೊಂಡ ಹಾವುಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳಿಗೆ ವಶಕ್ಕೆ ನೀಡಿದ್ದಾರೆ. ಹಳದಿ ಅನಕೊಂಡ ಅಳಿವಿನಂಚಿನಲ್ಲಿರುವ ಹಾವಿನ ಜಾತಿಗಳಾಗಿವೆ.