ಬೆಂಗಳೂರು :
ಮುಖ್ಯಮಂತ್ರಿ ಸಿದ್ದರಾಮಯ್ಯನವರೇ , ನಿಮಗೆ ತಾನು ಹಿಂದೂ ಎಂದು ಕರೆದುಕೊಳ್ಳುವ ಯಾವ ನೈತಿಕತೆಯೂ ಉಳಿದಿಲ್ಲ. ನನ್ನ ಹೆಸರಿನಲ್ಲಿ ರಾಮ ಇದ್ದಾನೆ, ನಾನೂ ಹಿಂದು ಎಂದು ಹೇಳಿಕೊಳ್ಳುವ ಯಾವ ನೈತಿಕತೆಯೂ ಇಲ್ಲ ಎಂದು ಸಿಎಂ ಸಿದ್ದರಾಮಯ್ಯರ ವಿರುದ್ಧ ರಾಜ್ಯ ಬಿಜೆಪಿ ಅಧ್ಯಕ್ಷ ಬಿವೈ ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.

ಮಂಡ್ಯ ಜಿಲ್ಲೆಯ ಕೆರಗೋಡು ಪಟ್ಟಣದಲ್ಲಿ ಹಿಂದೂಗಳ ಭಾರೀ ವಿರೋಧದ ನಡುವೆಯೂ ಪೊಲೀಸರು ಲಾಠಿಚಾರ್ಜ್ ನಡೆಸಿ ಹನುಮಧ್ವಜ ತೆರವು ಮಾಡಿಸಿರುವ ವಿಚಾರ ಸಂಬಮಧ ತಮ್ಮ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಹಿಂದುವಿರೋಧಿ ನೀತಿಗಳನ್ನು ಅನುಸರಿಸುತ್ತಾ ಓಲೈಕೆ ರಾಜಕಾರಣ ಮಾಡುತ್ತಿದೆ. ಒಂದು ಹನುಮಧ್ವಜ ತೆಗೆದರೆ ಹಿಂದುಗಳು ಮನೆಮನೆಯಲ್ಲೂ ಹನುಮಧ್ವಜ ಹಾರಿಸುವಂತೆ ವಿಡಿಯೋ ಮೂಲಕ ಕರೆ ನೀಡಿದ್ದಾರೆ.

ಇದೀಗ ಬಿಜೆಪಿ ರಾಜ್ಯಾಧ್ಯಕ್ಷ ಕರೆಕೊಟ್ಟಿರುವ ಮನೆ ಮನೆಯಲ್ಲಿ ಹನುಮಧ್ವಜ ಹಾರಿಸುವ ಅಭಿಯಾನಕ್ಕೆ ಭಾರೀ ಬೆಂಬಲ ವ್ಯಕ್ತವಾಗಿದೆ. ಮನೆ ಮನೆಯಲ್ಲೂ ಹನುಮಧ್ವಜ ಹಾರಿಸುವ ಮೂಲಕ ಸರ್ಕಾರದ ಹಿಂದೂ ವಿರೋಧಿ ನೀತಿಗೆ ಪ್ರತ್ಯುತ್ತರ ನೀಡಲು ರಾಜ್ಯ ಬಿಜೆಪಿ ಮುಂದಾಗಿದೆ.