ಮಂಗಳೂರು:
ಮಂಗಳೂರು ವಿಶ್ವವಿದ್ಯಾನಿಲಯದ
ನೂತನ ಆಡಳಿತ ಕುಲಸಚಿವರಾಗಿ ರಾಜು ಮೊಗವೀರ ಅವರನ್ನು ನೇಮಕಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಉಡುಪಿ ಜಿಲ್ಲಾ ಪಂಚಾಯ್ತಿ ಉಪ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಕೆಎಎಸ್ (ಆಯ್ಕೆ ಶ್ರೇಣಿ) ಅಧಿಕಾರಿಯಾಗಿರುವ ರಾಜು ಮೊಗವೀರ ಸೋಮವಾರ ಕುಲಸಚಿವರಾಗಿ ಅಧಿಕಾರ ಸ್ವೀಕಾರ ಮಾಡಿದ್ದಾರೆ. ಅವರನ್ನು ವಿವಿ ಕುಲಪತಿ ಪ್ರೊ.ಜಯರಾಜ್ ಅಮೀನ್ ಸ್ವಾಗತಿಸಿ, ಅಭಿನಂದಿಸಿದರು. ರಾಜು ಮೊಗವೀರ ಅವರು ಈ ಹಿಂದೆಯೂ ಮಂಗಳೂರು ವಿವಿ ಕುಲಸಚಿವರಾಗಿ ಕರ್ತವ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ.