ಬ್ರಹ್ಮಾವರ: ಬ್ರಹ್ಮಾವರದಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲೇ ಕೃಷಿ ಡಿಪ್ಲೋಮಾ ಕೋರ್ಸ್ ಪ್ರಾರಂಭಿಸಲು ವಿಶ್ವವಿದ್ಯಾಲಯದಿಂದ ಅಧಿಸೂಚನೆ ಹೊರಡಿಸುವಂತೆ ಕೃಷಿ ಸಚಿವರಿಗೆ ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಮನವಿ ಸಲ್ಲಿಸಿದ್ದಾರೆ.
ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯ ಶಿವಮೊಗ್ಗ ಇದರಡಿ ಬ್ರಹ್ಮಾವರ ಕೃಷಿ ಡಿಪ್ಲೋಮಾ ಕಾಲೇಜಿನಲ್ಲಿ ಕೃಷಿ ಡಿಪ್ಲೋಮಾ ಕೋರ್ಸ್ ಮುಂದುವರಿಸಲು ಸರಕಾರದಿಂದ ಆದೇಶ ಬಂದಿದೆ. ಆದರೆ, ಇದುವರೆಗೆ ವಿಶ್ವವಿದ್ಯಾಲಯ ಅಧಿಸೂಚನೆ ಹೊರಡಿಸಿಲ್ಲ. ಬೆಂಗಳೂರು ಕೃಷಿ ವಿಶ್ವವಿದ್ಯಾಲಯ ವ್ಯಾಪ್ತಿಯ ಕೃಷಿ ಡಿಪ್ಲೋಮಾ ಕಾಲೇಜು ಮಂಡ್ಯದಲ್ಲಿ ಈಗಾಗಲೇ ಪ್ರಾರಂಭಿಸಲು ಅಧಿಸೂಚನೆ ಹೊರಡಿಸಿದೆ. ಅದರಂತೆ, ಬ್ರಹ್ಮಾವರದಲ್ಲೂ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲೇ ತರಗತಿ ಆರಂಭಿಸಲು ಶಿವಮೊಗ್ಗ ವಿಶ್ವವಿದ್ಯಾಲಯಕ್ಕೆ ನಿರ್ದೇಶನ ನೀಡುವಂತೆ ಅವರು ಕೃಷಿ ಸಚಿವ ಚಲುವರಾಯಸ್ವಾಮಿ ಅವರಿಗೆ ಮನವಿ ಮಾಡಿದರು.