ಚಂಡೀಗಢ: ಲೋಕಸಭಾ ಚುನಾವಣೆ ಹೊತ್ತಲ್ಲೇ ಹರಿಯಾಣದಲ್ಲಿ ಅನಿರೀಕ್ಷಿತ ರಾಜಕೀಯ ಬೆಳವಣಿಗೆ ನಡೆದಿದೆ. ಹರಿಯಾಣ ಮುಖ್ಯಮಂತ್ರಿ ಎಂ.ಎಲ್.ಖಟ್ಟರ್ ಮತ್ತು ಸಚಿವ ಸಂಪುಟ ರಾಜೀನಾಮೆ ಸಲ್ಲಿಸಿದೆ.

ಹರಿಯಾಣದ ನೂತನ ಮುಖ್ಯಮಂತ್ರಿ ಇಂದೇ (ಮಂಗಳವಾರ) ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎನ್ನಲಾಗಿದೆ.

ಹರಿಯಾಣದಲ್ಲಿ ಬಿಜೆಪಿ-ಜನನಾಯಕ ಜನತಾ ಪಕ್ಷ (ಜೆಜೆಪಿ)ಯ ಆಡಳಿತ ಸಮ್ಮಿಶ್ರದಲ್ಲಿ ಬಿರುಕು ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರು ಎಲ್ಲಾ ಸಚಿವರು ರಾಜೀನಾಮೆ ನೀಡುವಂತೆ ಕೇಳಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.