
ರಾಯಚೂರು: ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ನಡೆಯುತ್ತಿರುವ ಶ್ರೀ ಗುರುರಾಯರ 353ನೇ ಆರಾಧಾನಾ ಮಹೋತವ ಹಿನ್ನೆಲೆಯಲ್ಲಿ ಬುಧವಾರ ನಡೆದ ಮಧ್ಯಾರಾಧನೆ ಎಲ್ಲೆಡೆ ಭಕ್ತಿಯ ಮೆರುಗು ಪಸರಿಸಿತು. ಮೈದುಂಬಿ ಹರಿಯುತ್ತಿರುವ ತುಂಗಭದ್ರಾ ತಟದ ಸುಕ್ಷೇತ್ರವು ರಾಯರ ಆರಾಧನಾ ಮಹೋತ್ಸವದಿಂದಾಗಿ ದೀಪಾಲಂಕಾರ, ಪುಷ್ಪಾಲಂಕಾರದಿಂದ ಕಂಗೊಳಿಸುತ್ತಿದ್ದು, ಮಧ್ಯಾರಾಧನೆ ದಿನ ಸಂಭ್ರಮ-ಸಡಗರ ಇನ್ನಷ್ಟು ಹೆಚ್ಚಾಗಿತ್ತು. ಕರ್ನಾಟಕ, ತಮಿಳುನಾಡು, ತೆಲಂಗಾಣ, ಆಂಧ್ರ, ಮಹಾರಾಷ್ಟ್ರ ಸೇರಿ ವಿವಿಧ ರಾಜ್ಯಗಳು ಹಾಗೂ ವಿದೇಶಗಳಿಂದಲೂ ಅಪಾರ ಸಂಖ್ಯೆಯಲ್ಲಿ ಆಗಮಿಸಿದ್ದ ಭಕ್ತರು ರಾಯರ ದರ್ಶನ ಪಡೆದು ಪುನೀತಗೊಂಡರು.