
ಮುಂಬೈ: ಶನಿವಾರ ನಸುಕಿನಲ್ಲಿ ನವಿ ಮುಂಬೈಯ ಶಹಬಾಜ್ ಎಂಬಲ್ಲಿ ಮೂರು ಅಂತಸ್ತಿನ ಕಟ್ಟಡ ಕುಸಿದು ಬಿದ್ದಿದೆ. ಇದರ ಪರಿಣಾಮ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಕಟ್ಟಡದಲ್ಲಿ ಒಟ್ಟು 13 ಪ್ಲಾಟ್ ಗಳಿದ್ದು ಇಬ್ಬರು ವ್ಯಕ್ತಿಗಳನ್ನು ರಕ್ಷಿಸಲಾಗಿದೆ. ಇನ್ನೂ ಹಲವರು ಸಿಲುಕಿರುವ ಸಾಧ್ಯತೆ ಇದೆ. ನಸುಕಿನ ವೇಳೆಗೆ ಕಟ್ಟಡ ಕುಸಿದು ಬಿದ್ದಿದ್ದು, ರಕ್ಷಣಾ ಕಾರ್ಯಾಚರಣೆ ಬರದಿಂದ ಸಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.