ಹುಬ್ಬಳ್ಳಿ: ವಿಧಾನ ಪರಿಷತ್ ಜೆಡಿಎಸ್ ಸದಸ್ಯ ಮರಿತಿಬ್ಬೇಗೌಡ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಸಭಾಪತಿ ಹೊರಟ್ಟಿ ಅವರ ನಿವಾಸದಲ್ಲಿ ರಾಜೀನಾಮೆ ಪತ್ರ ಸಲ್ಲಿಕೆ ಮಾಡಿದ್ದಾರೆ.
ಮಧ್ಯಾಹ್ನ 12 ಗಂಟೆ ಸುಮಾರಿಗೆ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ಹುಬ್ಬಳ್ಳಿಯ ಗೃಹ ಕಚೇರಿಗೆ ಆಗಮಿಸಿ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.
ರಾಜೀನಾಮೆ ಸ್ವೀಕರಿಸಿದ ಸಭಾಪತಿ ಬಸವರಾಜ ಹೊರಟ್ಟಿಯವರು, ಮರಿತಿಬ್ಬೇಗೌಡ ಸ್ವ ಹಿತಾಸಕ್ತಿಯಿಂದ ರಾಜೀನಾಮೆ ನೀಡಿದ್ದು, ರಾಜೀನಾಮೆ ಅಂಗೀಕರಿಸಲಾಗಿದೆ. ಇನ್ನೂ ಮುಂದಿನ ಕ್ರಮಗಳನ್ನು ಜಾರಿಗೊಳಿಸಲಾಗುತ್ತದೆ ಎಂದು ಮಾಹಿತಿ ನೀಡಿದರು.