Join The Telegram | Join The WhatsApp |
ಬೆಳಗಾವಿ :
ಮರಾಠಾ ಸಮಾಜಕ್ಕೆ ಮೀಸಲಾತಿ ನೀಡುವಂತೆ ಒತ್ತಾಯಿಸಿ ಡಿ.20 ರಂದು ಸುವರ್ಣ ವಿಧಾನ ಸೌಧದ ಬಳಿ ಧರಣಿ ಸತ್ಯಾಗ್ರಹ ನಡೆಸಿ ರಾಜ್ಯ ಸರ್ಕಾರದ ಗಮನಸೆಳೆಯಲಾಗುವುದು ಎಂದು ಮರಾಠಾ ಸಮಾಜದ ಮುಖಂಡ ಕಿರಣ ಜಾಧವ ತಿಳಿಸಿದ್ದಾರೆ.
ಮರಾಠಾ ಸಮಾಜದ ಪ್ರಭು ಮಂಜುನಾಥಸ್ವಾಮಿ ನೇತೃತ್ವದಲ್ಲಿ ರಾಜ್ಯದ ಮರಾಠಾ ಸಮಾಜದ ಶಾಸಕರು ಸದನದಲ್ಲಿ ಮರಾಠ ಮೀಸಲಾತಿ ವಿಚಾರವಾಗಿ ಚರ್ಚೆ ನಡೆಸಲಿದ್ದಾರೆ. ಕಳೆದ ವರ್ಷ ಹೋರಾಟ ನಡೆಸಿದ ನಂತರ ಸರ್ಕಾರ ಮರಾಠಾ ಸಮುದಾಯದ ಪ್ರಗತಿಗೆ ಮರಾಠಾ ಅಭಿವೃದ್ಧಿ ಪ್ರಾಧಿಕಾರವನ್ನು ಸ್ಥಾಪಿಸಿದೆ ಎಂದು ವಿವರಿಸಿದ್ದಾರೆ.
ಕಳೆದ ಇಪ್ಪತ್ತು ವರ್ಷಗಳಿಂದ ನಿರಂತರವಾಗಿ ಮರಾಠಾ ಸಮಾಜಕ್ಕೆ ಮೀಸಲಾತಿ ನೀಡಬೇಕೆಂದು ಒತ್ತಾಯಿಸುತ್ತಾ ಬರಲಾಗಿದೆ. ಸರಕಾರದ ಮೀಸಲಾತಿ ಇಲ್ಲದೆ ಮರಾಠ ಸಮಾಜದ ಪ್ರಗತಿ ಕುಂಠಿತವಾಗಿದೆ. ಅದಕ್ಕಾಗಿಯೇ ಮೀಸಲು ಬೇಡಿಕೆ ಕುರಿತು ಸರಕಾರದ ಗಮನ ಸೆಳೆಯಲು ಡಿ.20ರ ಮಂಗಳವಾರ ಸಮಸ್ತ ಮರಾಠ ಸಮಾಜದ ವತಿಯಿಂದ ಸುವರ್ಣ ವಿಧಾನ ಸೌಧದ ಎದುರು ಪ್ರತಿಭಟನೆ ನಡೆಸಲಾಗುವುದು. ರಾಜ್ಯದ ಎಲ್ಲಾ ಮರಾಠಾ ಶಾಸಕರು ಚಳಿಗಾಲದ ಅಧಿವೇಶನದಲ್ಲಿ ಮರಾಠಾ ಮೀಸಲಾತಿಗೆ ಒತ್ತಾಯಿಸಲಿದ್ದಾರೆ ಎಂದು ತಿಳಿಸಿದರು.
Join The Telegram | Join The WhatsApp |