ಬೆಂಗಳೂರು : ಸ್ಯಾಂಡಲ್‌ವುಡ್‌ ನಿರ್ದೇಶಕ ಗುರುಪ್ರಸಾದ್ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ಬಂದಿದೆ. ಅವರು ಭಾನುವಾರ ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಅವರ ಶವ ಪತ್ತೆಯಾಗಿದೆ. ಆತ್ಮಹತ್ಯೆಗೆ ಕಾರಣ ಏನು ಎನ್ನುವುದು ಇನ್ನಷ್ಟೇ ಗೊತ್ತಾಗಬೇಕಾಗಿದೆ. ಅವರ ಅಪಾರ್ಟ್ಮೆಂಟ್ ನಿಂದ ಕೊಳೆತ ವಾಸನೆ ಬಂದ ಹಿನ್ನೆಲೆಯಲ್ಲಿ ನೆರೆಹೊರೆಯ ನಿವಾಸಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸಾಲಗಾರರ ಕಿರುಕುಳದಿಂದ ಬೇಸತ್ತು ಅವರು ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.

ಬೆಂಗಳೂರು ಉತ್ತರ ತಾಲೂಕಿನ ಮಾದನಾಯಕನಹಳ್ಳಿ ಅಪಾರ್ಟ್ಮೆಂಟ್ ನಲ್ಲಿ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಎಂಟು ತಿಂಗಳಿನಿಂದ ಇಲ್ಲಿ ವಾಸವಾಗಿದ್ದರು. ಇತ್ತೀಚಿಗಷ್ಟೇ ಎರಡನೇ ಮದುವೆಯಾಗಿದ್ದರು. ಅವರ ವಿರುದ್ಧ ಇತ್ತೀಚಿಗೆ ಪುಸ್ತಕ ಮತ್ತು ಸಿಡಿಗಳನ್ನು ಖರೀದಿಸಿ ಹಣ ನೀಡದಿರುವ ಆರೋಪ ಕೇಳಿಬಂದಿತ್ತು. ಈ ಬಗ್ಗೆ ಜಯನಗರ ಟೋಟಲ್ ಕನ್ನಡ ಮಳಿಗೆ ಮಾಲಿಕ ಲಕ್ಷ್ಮಿಕಾಂತ್ ಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದರು.

ಮಠ, ಎದ್ದೇಳು ಮಂಜುನಾಥ, ಎರಡನೇ ಸಲ, ರಂಗ ನಾಯಕ ಸೇರಿದಂತೆ ಹಲವು ಸಿನಿಮಾಗಳಲ್ಲಿ ಅವರು ನಟನೆ ಹಾಗೂ ನಿರ್ದೇಶನ ಮಾಡಿದ್ದರು.