Join The Telegram | Join The WhatsApp |
ಬೆಂಗಳೂರು :
ಶಾಲಾ-ಕಾಲೇಜುಗಳಲ್ಲಿ ಧ್ಯಾನ ಮಾಡಿಸುವ ಮಹತ್ವದ ನಿರ್ಧಾರ ಒಂದು ಕೇಂದ್ರ ಸರ್ಕಾರ ತೆಗೆದುಕೊಂಡಿದೆ. 75 ನೇ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವದ ನೆನಪಿಗೆ ಕೇಂದ್ರ ಸರ್ಕಾರವು ಈ ಮಹತ್ವದ ನಿರ್ಧಾರವನ್ನು ಮಾಡಿದೆ.
ಇನ್ನು ಮುಂದೆ ದೇಶದ ಎಲ್ಲಾ ವಿಶ್ವವಿದ್ಯಾಲಯಗಳು ಪದವಿ ಕಾಲೇಜುಗಳಲ್ಲಿ ಧ್ಯಾನ ಮಾಡಿಸುವಂತೆ ಯುಜಿಸಿ ಕಾರ್ಯದರ್ಶಿ ಪ್ರೊ. ರಜನೀಶ್ ಜೈನರಿಂದ ಪತ್ರ ಬರೆಯಲಾಗಿದೆ.
ಕೇಂದ್ರ ಸಂಸ್ಕೃತಿ ಇಲಾಖೆಯು ಧ್ಯಾನ ಮಾಡಿಸುವ ನಿಟ್ಟಿನಲ್ಲಿ ಆರ್ಟ್ ಆಫ್ ಲಿವಿಂಗ್ ಸಂಸ್ಥೆ ಜೊತೆ ಒಪ್ಪಂದ ಮಾಡಿಕೊಂಡಿದ್ದು ವಿಶ್ವವಿದ್ಯಾಲಯಗಳು ,ಪದವಿ ಕಾಲೇಜುಗಳಲ್ಲಿ ಹರ್ ಘರ್ ಧ್ಯಾನ ಅಭಿಯಾನ ನಡೆಸಲು ನಿರ್ಧಾರ ಕೈಗೊಂಡಿದೆ.
ಈ ಅಭಿಯಾನಕ್ಕೆ ಕಾಲೇಜು ವಿದ್ಯಾರ್ಥಿಗಳು ಯಾವುದೇ ಶುಲ್ಕ ಪಾವತಿಸಬೇಕಾಗಿ ಇಲ್ಲ.
ಆರ್ಟ್ ಆಫ್ ಲಿವಿಂಗ್ ಫೌಂಡೇಶನ್ ಅಭಿವೃದ್ಧಿಪಡಿಸಿರುವ ಧ್ಯಾನದ ಮಾದರಿಗಳನ್ನು ಅಳವಡಿಸಿಕೊಳ್ಳಲು ಯುಜಿಸಿ ಸಂಸ್ಥೆಗಳಿಗೆ ಸೂಚನೆ ನೀಡಿದೆ.
Join The Telegram | Join The WhatsApp |