Join The Telegram | Join The WhatsApp |
ಬೆಂಗಳೂರು-
ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ಪಕ್ಷಗಳ ಮೇಲೆ ಒತ್ತಡ ಕೂಡ ಹೆಚ್ಚಾಗಿದೆ. ಈಗಾಗಲೇ 124 ಅಭ್ಯರ್ಥಿಗಳ ಒಂದು ಪಟ್ಟಿ ಬಿಡುಗಡೆ ಮಾಡಿರುವ ಕಾಂಗ್ರೆಸ್‌ಗೆ, ಉಳಿದ 100 ಕ್ಷೇತ್ರಗಳಿಗೂ ಅಭ್ಯರ್ಥಿಗಳ ಪಟ್ಟಿಯನ್ನು ಘೋಷಿಸುವಂತೆ ಆಕಾಂಕ್ಷಿಗಳು ಒತ್ತಾಯಿಸುತ್ತಿದ್ದು, ಈ ಕುರಿತು ಸೋಮವಾರ ಸ್ಕ್ರೀನಿಂಗ್ ಸಮಿತಿ ಸಭೆ ನಡೆಸಲಿದೆ. ಕಾಂಗ್ರೆಸ್ ಮೊದಲ ಪಟ್ಟಿಯಲ್ಲಿ ಹೆಚ್ಚು ಪೈಪೋಟಿಯಿಲ್ಲದ ಕಾರಣ ಹೆಸರುಗಳನ್ನು ಅಂತಿಮಗೊಳಿಸಿತ್ತು. ಆದರೆ, ಇದರಲ್ಲೂ ಹಲವು ಅಸಮಾಧಾನ ಹೊಗೆಯಾಡುತ್ತಿದೆ. ಈಗ ಉಳಿದ 100 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಲು ಕಾಂಗ್ರೆಸ್ ವರಿಷ್ಠರು ಕಸರತ್ತು ನಡೆಸುತ್ತಿದ್ದಾರೆ.
ಮೊದಲ ಪಟ್ಟಿ ಬಿಡುಗಡೆಯಾದ ಬೆನ್ನಲ್ಲೆ ಟಿಕೆಟ್ ಆಕಾಂಕ್ಷಿಗಳು ಪಕ್ಷದ ಮೇಲೆ ಒತ್ತಡ ಹೇರುತ್ತಿದ್ದಾರೆ. ಹೀಗಾಗಿ ಸೋಮವಾರ ಬೆಂಗಳೂರು ಅಥವಾ ಬೆಂಗಳೂರು ಹೊರವಲಯದಲ್ಲಿ ಎಐಸಿಸಿ ನೇಮಕ ಮಾಡಿರುವ ಸ್ಕ್ರೀನಿಂಗ್ ಸಮಿತಿಯು ಸಭೆ ನಡೆಸಲಿದೆ. ಸಭೆಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಸ್ಕ್ರೀನಿಂಗ್ ಸಮಿತಿ ಅಧ್ಯಕ್ಷ ಮೋಹನ್ ಪ್ರಕಾಶ್, ಸದಸ್ಯರಾದ ನೀರಜ್ ಡಾಂಗಿ, ಮೊಹಮ್ಮದ್ ಜಾವೇದ್ ಪಾಲ್ಗೊಳ್ಳಲಿದ್ದಾರೆ.
Join The Telegram | Join The WhatsApp |