ಉಡುಪಿ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು, ಉಡುಪಿಯ ಪಡು ತೋನ್ಸೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಗುಜ್ಜರಬೆಟ್ಟು (ಹೂಡೆ) ಗ್ರಾಮಕ್ಕೆ ಭೇಟಿ ನೀಡಿ, ಕಡಲ ಕೊರೆತದಿಂದ ಹಾನಿಗೊಳಗಾದ ಪ್ರದೇಶವನ್ನು ವೀಕ್ಷಣೆ ಮಾಡಿದರು. ಮಳೆಯಿಂದ ಆಗಿರುವ ನಷ್ಟದ ಬಗ್ಗೆ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಈ ವೇಳೆ ಉಡುಪಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ಅರುಣ್, ಜಿಲ್ಲಾ ಪಂಚಾಯತ್ ಸಿಇಒ ಪ್ರತೀಕ್ ಬಯಲ್, ಕುಂದಾಪುರ ವಿಭಾಗದ ಸಹಾಯಕ ಆಯುಕ್ತೆ ಎಸ್. ಆರ್. ರಶ್ಮಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.