Join The Telegram | Join The WhatsApp |
ಬೆಂಗಳೂರು-
ಅಬಕಾರಿ ಇಲಾಖೆಯಲ್ಲಿ ಖಾಲಿ ಇರುವ 1,100 ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಅಬಕಾರಿ ಸಚಿವ ಕೆ ಗೋಪಾಲಯ್ಯ ಹೇಳಿದ್ದಾರೆ. ಈ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಬಕಾರಿ ಇಲಾಖೆಯಲ್ಲಿ ಖಾಲಿ ಇರುವ 1000 ಅಬಕಾರಿ ಪೇದೆ, 100 ಸಬ್ ಇನ್ಸ್ ಪೆಕ್ಟರ್ ಹುದ್ದೆಗಳ ನೇಮಕಾತಿಗೆ ಅಬಕಾರಿ ಇಲಾಖೆಯಿಂದ ಕೆಪಿಎಸ್ ಸಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಶೀಘ್ರವೇ ಖಾಲಿ ಇರುವ 1,100 ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ತಿಳಿಸಿದ್ದಾರೆ.
Join The Telegram | Join The WhatsApp |