Join The Telegram | Join The WhatsApp |
ಬೆಂಗಳೂರು-
ಮಾಸಿಕ 75 ಯೂನಿಟ್ ಉಚಿತ ವಿದ್ಯುತ್ ಯೋಜನೆ ಅನುಷ್ಠಾನ ವಿಚಾರಕ್ಕೆ ಸಂಬಂಧಿಸಿದಂತೆ ಯೋಜನೆಯನ್ನು ತ್ವರಿತವಾಗಿ ಅನುಷ್ಠಾನಗೊಳಿಸಲು ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚನೆ ನೀಡಿದ್ದಾರೆ. ವಿಕಾಸಸೌಧದಲ್ಲಿ ನಡೆದ ಪ್ರಗತಿ ಪರಿಶೀಲನೆ ಸಭೆಯಲ್ಲಿ ಅವರು ಮಾತನಾಡಿ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಸಮುದಾಯದ ಬಿಪಿಎಲ್ ಕುಟುಂಬಗಳಿಗೆ ಉಚಿತ ವಿದ್ಯುತ್ ಯೋಜನೆ ಜಾರಿಗೆ ನಿಯಮಗಳನ್ನು ಸರಳೀಕರಿಸಲು ಸೂಚನೆ ನೀಡಿದ್ದಾರೆ.
ಡಿಬಿಟಿ ಹೊರತುಪಡಿಸಿ ಸರಳ ಮಾರ್ಗದಲ್ಲಿ ಯೋಜನೆ ಜಾರಿಗೊಳಿಸಬೇಕು. ಫಲಾನುಭವಿಗಳ ಕುಟುಂಬಗಳ ವಿದ್ಯುತ್ ಶುಲ್ಕ ವಸೂಲಿ ಹಾಗೂ ಪರಿಹಾರ ಕ್ರಮಗಳಿಗೆ ಮಾರ್ಗೋಪಾಯ ಕಂಡುಕೊಳ್ಳಬೇಕು. ಎಲ್ಲಾ ಎಸ್ಕಾಂಗಳಲ್ಲಿ ಬಾಕಿ ಉಳಿದಿರುವ ವಿದ್ಯುತ್ ಶುಲ್ಕ ವಸೂಲಿಗೆ ಕ್ರಮಕೈಗೊಳ್ಳಬೇಕು ಎಂದು ಸೂಚನೆ ನೀಡಿದ್ದಾರೆ.
Join The Telegram | Join The WhatsApp |