ಬಳ್ಳಾರಿ : ನಗರದ ಶಾಂತಿಧಾಮದ ಅವರಣದಲ್ಲಿರುವ ರಾಜ್ಯ ಮಹಿಳಾ ನಿಲಯಕ್ಕೆ ಶನಿವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಭೇಟಿ ನೀಡಿದರು.

ಶೋಷಣೆಗೆ ಒಳಗಾದ ಹೆಣ್ಣು ಮಕ್ಕಳ ಕುಂದು ಕೊರತೆಗಳನ್ನು ಆಲಿಸಿದರು.

ಮಹಿಳಾ ನಿಲಯದಲ್ಲಿ ಆಶ್ರಯ ಪಡೆಯಲು ಕಾರಣವೇನು ಎನ್ನುವ ಕುರಿತು ಮಹಿಳೆಯರಲ್ಲಿ ಪ್ರಶ್ನಿಸಿದರು. ದೌರ್ಜನಕ್ಕೆ ಒಳಗಾದ ಮಹಿಳೆಯರ ಸಮಸ್ಯೆಗಳನ್ನು ಆಲಿಸಿದರು. ಸ್ವಚ್ಛತೆ ಮತ್ತು ಆರೋಗ್ಯದ ಬಗ್ಗೆ ಗಮನಹರಿಸಿಯೆಂದು ಸಚಿವರು ಸಲಹೆ ನೀಡಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಂಟಿ ನಿರ್ದೇಶಕರು ಹಾಗೂ ಸಚಿವರ ವಿಶೇಷ ಕರ್ತವ್ಯ ಅಧಿಕಾರಿ ಬಿ.ಎಚ್.ನಿಶ್ಚಲ್, ಉಪನಿರ್ದೇಶಕ ಕೆ. ಎಚ್. ವಿಜಯಕುಮಾರ್ ಸೇರಿದಂತೆ ಮತ್ತಿತರ ಅಧಿಕಾರಿಗಳು ಹಾಜರಿದ್ದರು.