ಬೆಳಗಾವಿ: ಕುಡಚಿ ಪಟ್ಟಣದ ಸಮೀಪದಲ್ಲಿ ಕೃಷ್ಣಾ ನದಿಯ ನೀರಿನ ಮಟ್ಟವನ್ನು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಅವರು ಸೋಮವಾರ ಪರಿಶೀಲನೆ ನಡೆಸಿದರು.

ಈ ವೇಳೆ ಮಾತನಾಡಿದ ಅವರು, ಕೊಯ್ನಾ ಡ್ಯಾಮ್ ನಿಂದ ಕೃಷ್ಣಾ ನದಿಗೆ ನೀರು ಬಿಡಲು ಸಿಎಂ ಸಿದ್ದರಾಮಯ್ಯನವರು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ ಅವರಿಗೆ ಪತ್ರ ಬರೆದಿದ್ದಾರೆ. ಕೃ‌ಷ್ಣಾ ನದಿಗೆ ಕೊಯ್ನಾ ಡ್ಯಾಮ್ ನಿಂದ ಶೀಘ್ರವೇ ನೀರು ಹರಿಸಲು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು ನೀರು ಬಿಡಲು ಒಪ್ಪಿಗೆ ನೀಡಿದ್ದಾರೆ ಎಂದರು.

ಕಳೆದ ಒಂದು ವಾರದಿಂದ ಮಳೆಯೂ ಸುರಿಯುತ್ತಿದ್ದು, ಕೊಯ್ನಾ ಜಲಾಶಯದಿಂದ ಮಹಾರಾಷ್ಟ್ರ ಸರ್ಕಾರ ನೀರು ಹರಿಸಿದ ನಂತರ ಸಾರ್ವಜನಿಕರು ನೀರನ್ನು ಕುಡಿಯಲು ಹಾಗೂ ಜನಜಾನುವಾರುಗಳಿಗೆ ಸರಿಯಾಗಿ ಸದ್ಬಳಕೆ ಮಾಡಿಕೊಳ್ಳಬೇಕೆಂದು ಎಂದು ಮನವಿ‌ ಮಾಡಿದರು. ಈ‌‌ ಸಂದರ್ಭದಲ್ಲಿ ಮಾಜಿ ಶಾಸಕ ಶಾಮ ಘಾಟಗೆ ಸೇರಿದಂತೆ ಸ್ಥಳೀಯ ಮುಖಂಡರು ಹಾಗೂ ಕುಡಚಿ ಗ್ರಾಮಸ್ಥರು ಉಪಸ್ಥಿತರಿದ್ದರು.