ಬೆಳಗಾವಿ : ಚಿಕ್ಕೋಡಿ ಲೋಕಸಭಾ ಮತಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಶಂಭು ಕಲ್ಲೋಳಿಕರಗೆ ಇನ್ನೂ 10 ಸಲ ಟಿಕೆಟ್ ತಪ್ಪಿಸುತ್ತೇನೆ ಎಂದು ಸಚಿವ ಸತೀಶ ಜಾರಕಿಹೊಳಿ ಗುಡುಗಿದ್ದಾರೆ.

ಉಗಾರ ಖುರ್ದ ಗ್ರಾಮದ ಶ್ರೀಹರಿ ಮಹಾವಿದ್ಯಾಲಯ ಆವರಣದಲ್ಲಿ ಕಾಂಗ್ರೆಸ್ ಬೃಹತ್ ಸಮಾವೇಶಕ್ಕೆ ನಿರ್ಮಿಸಿದ ಬೃಹತ್ ಟೆಂಟ್ ಸಿದ್ಧತೆಗಳನ್ನು ಪರಿಶೀಲಿಸಿ ಸುದ್ದಿಗಾರರೊಂದಿಗೆ ಮಾತನಾಡಿದರು. ಶಂಭು ಕಲ್ಲೋಳಿಕರಗೆ ಟಿಕೆಟ್ ತಪ್ಪಿಸಿದ್ದು ನೀವೇ ಎನ್ನುವ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನಮ್ಮದೇನಿದ್ದರೂ ಬಿಜೆಪಿಯೊಂದಿಗೆ ನೇರ ಹಣಾಹಣಿ. ಇನ್ನುಳಿದಂತೆ 18 ಜನ ಪಕ್ಷೇತರ ಅಭ್ಯರ್ಥಿಗಳಲ್ಲಿ ಶಂಭು ಕಲ್ಲೋಳಿಕರ ಸಹಾ ಒಬ್ಬರು. ಕ್ಷೇತ್ರಕ್ಕೆ ಅವರ ಕೊಡುಗೆ ಏನು ಪ್ರಶ್ನಿಸಿದರು. ನಾವು 30 ವರ್ಷಗಳಿಂದ ದೀನದಲಿತರ ಪರವಾಗಿ ಕಾರ್ಯನಿರ್ವಹಿಸಿದ್ದೇವೆ. ಮತದಾರರು ಕಾಂಗ್ರೆಸ್ ಪಕ್ಷದ ಕಡೆ ಹೆಚ್ಚಿನ ಒಲವು ತೋರುತ್ತಿದ್ದಾರೆ ಎಂದು ಹೇಳಿದರು.