ಉಡುಪಿ: ವ್ಯಾಪಕ ಮಳೆಯ ಹಿನ್ನೆಲೆಯಲ್ಲಿ ಕುಂದಾಪುರ ಮತ್ತು ಬ್ರಹ್ಮಾವರ ತಾಲೂಕುಗಳ ಶಾಲಾ-ಕಾಲೇಜುಗಳಿಗೆ ಕುಂದಾಪುರ ಉಪವಿಭಾಗಾಧಿಕಾರಿಗಳು ಸೋಮವಾರ ರಜೆ ಘೋಷಣೆ ಮಾಡಿದ್ದಾರೆ ಎಂಬ ಸುಳ್ಳು ಸುದ್ದಿ ಆದೇಶದ ಪ್ರತಿಯನ್ನು ಕಿಡಿಗೇಡಿಗಳು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದು ಗೊಂದಲಕ್ಕೆ ಕಾರಣವಾಗಿದೆ. ಅಂತಹ ಯಾವುದೇ ಆದೇಶ ನೀಡಿಲ್ಲ, ಇದು ನಕಲಿ ಆದೇಶ ಎಂದು ಉಪವಿಭಾಗಾಧಿಕಾರಿಗಳ ಕಚೇರಿ ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದೆ. ಕೋವಿಡ್ ಸಾಂಕ್ರಾಮಿಕ ಸಂದರ್ಭದಲ್ಲಿ ಕಿಡಿಗೇಡಿಗಳು ಇಂತಹ ಸುಳ್ಳು ಸುದ್ದಿ ಪಸರಿಸಿ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರಲ್ಲಿ ಗೊಂದಲಕ್ಕೆ ಕಾರಣವಾಗಿದ್ದರು. ಆ ಸಂದರ್ಭದಲ್ಲಿ ಕಿಡಿಗೇಡಿಗಳ ಮೇಲೆ ಪ್ರಕರಣ ದಾಖಲು ಮಾಡಲಾಗಿದ್ದು ಇದೀಗ ಮತ್ತೆ ಅಂತಹ ಸುಳ್ಳು ಸುದ್ದಿ ಹಬ್ಬಿಸಲಾಗುತ್ತಿದೆ.