ಮೂಡುಬಿದಿರೆ: ನಾಪತ್ತೆಯಾಗಿದ್ದ ಇಲ್ಲಿನ ಖಾಸಗಿ ಶಿಕ್ಷಣ ಸಂಸ್ಥೆಯ ಪ್ರಥಮ ವರ್ಷದ ಬಿಪಿಟಿ ಶಿಕ್ಷಣ ಪಡೆಯುತ್ತಿದ್ದ ವಿದ್ಯಾರ್ಥಿನಿ ಆದಿರಾ ಕೇರಳದಲ್ಲಿ ಮದುವೆಯಾಗಿ ಪತ್ತೆಯಾಗಿದ್ದಾರೆ. ಬೈಂದೂರು ತಾಲೂಕು ಕೊಲ್ಲೂರಿನ ನಿವಾಸಿ ಖಾಸಗಿ ಕಾಲೇಜಿನಲ್ಲಿ ಬಿಪಿಟಿ ಶಿಕ್ಷಣ ಪಡೆಯುತ್ತಿದ್ದ ಆದಿರಾ (19) ಶುಕ್ರವಾರ ಬೆಳಗ್ಗೆ ಸಹಪಾಠಿಗಳ ಜತೆ ಸ್ವರಾಜ್ಯ ಮೈದಾನದಲ್ಲಿರುವ ಕಾಲೇಜಿಗೆ ವಿದ್ಯಾಸಂಸ್ಥೆಯ ಬಸ್ಸಿನಲ್ಲಿ ಬಂದು ಕನ್ನಡ ಭವನದ ಬಳಿ ಇಳಿದಿದ್ದಳು. ಅಲ್ಲಿಂದ ಕಾಲೇಜಿಗೆ ಹೋಗದೆ ನಾಪತ್ತೆಯಾಗಿದ್ದಳು. ಈ ಬಗ್ಗೆ ಆಕೆಯ ಹೆತ್ತವರು ಮೂಡುಬಿದಿರೆ ಪೊಲೀಸರಿಗೆ ದೂರು ನೀಡಿದ್ದರು. ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಕಾಲೇಜಿನ ಹಾಸ್ಟೆಲ್‌ನಲ್ಲಿ ವಾಸವಾಗಿ ಶಿಕ್ಷಣ ಪಡೆಯುತ್ತಿದ್ದಳು. ಇದೀಗ ಬೈಂದೂರಿನ ನಿವಾಸಿಯಾಗಿರುವ ಪ್ರಿಯಕರನನ್ನು ಮದುವೆಯಾಗಿ ಪತ್ತೆಯಾಗಿದ್ದಾರೆ.