ಮೈಸೂರು : ಮೈಸೂರಿನ ಹೊರವಲಯದ ನಾಡನಹಳ್ಳಿಯಲ್ಲಿ ಶಾಸಕ ಎ.ಆರ್. ಕೃಷ್ಣಮೂರ್ತಿ ಅವರ ಕಾರು ಅಪಘಾತಕ್ಕೀಡಾಗಿದೆ. ಅದೃಷ್ಟವಶಾತ್‌ ಕಾರಿನಲ್ಲಿದ್ದ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕೊಳ್ಳೆಗಾಲದ ಕಾಂಗ್ರೆಸ್ ಶಾಸಕ ಎ.ಆರ್. ಕೃಷ್ಣಮೂರ್ತಿ ಬುಧವಾರ ತಡರಾತ್ರಿ ಚಾಮರಾಜನಗರದಿಂದ ಮೈಸೂರಿನ ಮನೆಗೆ ಹೋಗುವ ಅಪಘಾತ ಸಂಭವಿಸಿದೆ. ಚಲಿಸುತ್ತಿದ್ದಾಗಲೇ ಕಾರಿನ ಟೈರ್ ಸ್ಫೋಟಗೊಂಡಿದೆ. ಪರಿಣಾಮ ಚಾಲಕನ ನಿಯಂತ್ರಣಕ್ಕೆ ಸಿಗದೇ ಕಾರು ರಸ್ತೆ ಬಿಟ್ಟು ಪಕ್ಕಕ್ಕೆ ಇಳಿದಿದೆ.