ಪುತ್ತೂರು: ಪುತ್ತೂರುಕೆಎಸ್ ಆರ್ ಟಿ ಸಿ ಡಿಪೋದಲ್ಲಿ ಚಾಲಕ/ ನಿರ್ವಾಹಕರ ಕೊರತೆ ಇದ್ದು ಸರಕಾರ ಹೆಚ್ಚುವರಿಯಾಗಿ ಚಾಲಕ/ ನಿರ್ವಾಹಕರನ್ನು ನೇಮಕ ಮಾಡುವಂತೆ ಸಾರಿಗೆ ಹಾಗೂ ಮುಜರಾಯಿ ಖಾತೆ ಸಚಿವ ರಾಮಲಿಂಗಾರೆಡ್ಡಿಯವರಿಗೆ ಶಾಸಕ ಅಶೋಕ್ ರೈ ಯವರು ಮನವಿ ಸಲ್ಲಿಸಿದ್ದಾರೆ.
ಗುರುವಾರ ಬೆಂಗಳೂರಿನಲ್ಲಿ ಸಚಿವರನ್ನುಭೇಟಿಯಾದ ಶಾಸಕರು ಪುತ್ತೂರು ತಾಲೂಕಿನ ಗ್ರಾಮಾಂತರ ಭಾಗದಲ್ಲಿ ಬಸ್ ಸಂಚಾರ ಹೆಚ್ಚುವರಿಯಾಗಿ ವ್ಯವಸ್ಥೆ ಮಾಡುವಲ್ಲಿ ಚಾಲಕ/ ನಿರ್ವಾಹಕರ ಕೊರತೆ ಇದೆ. ಬಸ್ ಇದ್ದರೂ ಚಾಲಕರ ಕೊರತೆಯಿಂದ ಗ್ರಾಮೀಣ ಭಾಗಕ್ಕೆ ಬಸ್ ಓಡಾಟ ನಡೆಸಲು ಅಸಾಧ್ಯವಾಗಿದೆ. ಸಾರ್ವಜನಿಕರ ಹಿತ ದೃಷ್ಟಿಯಿಂದ ಹೆಚ್ಚುವರಿಯಾಗಿ ಚಾಲಕ/ ನಿರ್ವಾಹಕರನ್ನು ನೇಮಿಸುವಂತೆ ಸಚಿವರಲ್ಲಿಮನವಿ ಸಲ್ಲಿಸಿದ್ದಾರೆ.
ಅಂತರರಾಜ್ಯ ಬಸ್ ಸಂಚಾರಕ್ಕೆ ಮನವಿ
ಕಾಸರಗೋಡು ಜಿಲ್ಲೆಯ ಕಾಟುಕುಕ್ಕೆಗೆ ಪುತ್ತೂರಿನಿಂದ ಕೆಎಸ್ಆರ್ಟಿಸಿ ಬಸ್ ಸಂಚಾರ ಆರಂಭ ಮಾಡಲು ಇಲಾಖೆಯಿಂದ ಅನುಮತಿನೀಡುವಂತೆಯೂ ಸಚಿವರಲ್ಲಿ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ನಗರ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದಾಲಿ, ಗ್ಯಾರಂಟಿಸಮಿತಿ ಪುತ್ತೂರು ತಾಲೂಕು ಅಧ್ಯಕ್ಷ ಉಮಾನಾಥ ಶೆಟ್ಡಿ, ಪಕ್ಷದ ಮುಖಂಡರಾದ ಮುರಳೀಧರ್ ರೈ ಮಟಂತಬೆಟ್ಟು, ರೋಶನ್ ರೈ ಬನ್ನೂರು, ಪ್ರಮೋದ್ ಕೆ ಎಸ್ ಕೊಳ್ತಿಗೆ ಉಪಸ್ಥಿತರಿದ್ದರು.