ಬೆಳಗಾವಿ: ಲೋಕಸಭಾ ಚುನಾವಣೆ ನಂತರ ಆದಷ್ಟು ಬೇಗ ರಾಜ್ಯದಲ್ಲಿ ಡಬಲ್ ಇಂಜಿನ್ ಸರಕಾರ ಬರಲಿದೆ ಎಂದು ಬೆಳಗಾವಿಯಲ್ಲಿ ಶಾಸಕ ರಮೇಶ್ ಜಾರಕಿಹೊಳಿ ಹೊಸ ಬಾಂಬ್ ಸಿಡಿಸಿದ್ದಾರೆ.

ಬೆಳಗಾವಿ ನಗರದ ಹಿಂಡಲಗಾ ಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು‌, ನಾನು ನನ್ನ ತಮ್ಮನಿಗೆ ಮಾತು ಕೊಟ್ಟಿದ್ದೇನೆ ಅದಕ್ಕೆ ಮಾತಾಡ್ತಿಲ್ಲ. ಹೆದರಿ ಮಾತಾಡೋದನ್ನ ಬಿಟ್ಟಿಲ್ಲ. ಚುನಾವಣೆ ಫಲಿತಾಂಶದ ಬಳಿಕ ಎಲ್ಲವನ್ನೂ ಮಾತಾಡುತ್ತೇನೆ. ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಸೋಲು ಬಿಜೆಪಿ ಗೆಲುವು ಖಚಿತ. ಆದರೆ ಈ ಬಾರಿ ಜಗದೀಶ್ ಶೆಟ್ಟರ್ ಗೆಲ್ತಾರೆ ಮೋದಿಯವರು ಮೂರನೇ ಬಾರಿಗೆ ಪ್ರಧಾನಿಯಾಗ್ತಾರೆ ಎಂದ ಅವರು, ಮಹಾರಾಷ್ಟ್ರದಲ್ಲಿ ನಮ್ಮ ಸರ್ಕಾರ ಇರೋದರಿಂದ ಬೆಳಗಾವಿ ಪಶ್ಚಿಮ ಭಾಗದಲ್ಲಿ ನೀರಾವರಿ ಯೋಜನೆ ಮಾಡೋದಿದೆ. ಬೆಳಗಾವಿ ಗ್ರಾಮೀಣ ಭಾಗದಲ್ಲಿ ಇಪ್ಪತ್ತೈದು ಸಾವಿರ ಲೀಡ್ ಜೊತೆಗೆ ಶೆಟ್ಟರ್ ಅವರು ಎರಡರಿಂದ ಎರಡೂವರೆ ಲಕ್ಷ ಮತಗಳಿಂದ ಗೆಲ್ತಾರೆ ಎಂದರು.
ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಮಾತನಾಡಿ, ದೇಶಕ್ಕೆ ಇಂದು ನರೇಂದ್ರ ಮೋದಿಯವರು ಅವಶ್ಯ ಇದೆ. ಶೆಟ್ಟರ್ ಅವರಿಗೂ ಬೆಳಗಾವಿಗೆ ಮೂವತ್ತು ವರ್ಷದ ನಂಟಿದೆ. ಸುರೇಶ್ ಅಂಗಡಿ ನಾವು ಸೇರಿ ಬಿಜೆಪಿ ಕಟ್ಟುವ ಕೆಲಸ ಮಾಡಿದ್ದೇವೆ. ಈ ಭಾಗದ ಅಭಿವೃದ್ಧಿಗೆ ಅಸೆಂಬ್ಲಿಯಲ್ಲಿ ಧ್ವನಿ ಎತ್ತುವ ಕೆಲಸ ಮಾಡಿದ್ದೇನೆ. ಬೆಳಗಾವಿ ಗ್ರಾಮೀಣ ಭಾಗದಲ್ಲಿ ಅಭಿವೃದ್ಧಿ ಕಾರ್ಯ ಮುಂದುವರೆಸುವ ಕೆಲಸ ಮಾಡುತ್ತೇನೆ. ನರೇಂದ್ರ ಮೋದಿಯವರನ್ನ ಮೂರನೇ ಬಾರಿಗೆ ಪ್ರಧಾನಿ ಮಾಡಲು ಶಕ್ತಿ ಕೊಡಿ. 17 ರಂದು ನಾಮಪತ್ರ ಸಲ್ಲಿಕೆ ಮಾಡ್ತೇನಿ ಬಂದು ಎಲ್ಲರೂ ಶಕ್ತಿ ಕೊಡಿ ಎಂದರು.

ಮಾಜಿ ಶಾಸಕ ಸಂಜಯ ಪಾಟೀಲ್ ಮಾತನಾಡಿ, ಈ ಬಾರಿ ಬೆಳಗಾವಿ ಲೋಕಸಭಾ ಅಭ್ಯರ್ಥಿಯನ್ನು 2 ಲಕ್ಷ ಮತಗಳ ಅಂತರದಲ್ಲಿ ಗೆಲ್ಲಿಸಿಕೊಂಡು ಬರುವ ಶಫತ ಮಾಡಿದ್ದೆವೆ. ವಿರೋಧ ಪಕ್ಷದವರು ಚುನಾವಣೆಯನ್ನು ಹಣದಿಂದ ಮಾಡುತ್ತಾರೆ. ಆದರೆ ಪ್ರಧಾನಿ ನರೇಂದ್ರ ಮೋದಿ 18 ಗಂಟೆಗಳ ಕಾಲ ಕಾರ್ಯನಿರ್ವಹಿಸಿ ಪ್ರೀತಿಯ ರಾಜಕಾರವನ್ನು ಮಾಡುತ್ತಿದ್ದಾರೆ. ಸಂಸ್ಕೃತಿ. ದೇಶದ ಅಭಿವೃದ್ಧಿ ಬಿಜೆಪಿ ಸಂಸ್ಕೃತಿ. ಬಿಜೆಪಿ ಅಭ್ಯರ್ಥಿಗೆ ತಮ್ಮ ಮತವನ್ನು ನೀಡುವ ಮೂಲಕ ಮೂರನೇ ಬಾರಿಗೆ ನರೇಂದ್ರ ಮೋದಿಯವರನ್ನು ಪ್ರಧಾನಿಯನ್ನಾಗಿ ಮಾಡೋಣ ಎಂದರು.

ಸಂಸದೆ ಮಂಗಳಾ ಅಂಗಡಿಯವರು ಮಾತನಾಡಿ, ಮೋದಿ ಪವಾಡ ಪುರುಷ ಇದ್ದಂತೆ. 500 ವರ್ಷಗಳಿಂದ ಲಕ್ಷಾಂತರ ಕರಸೇವಕರು ಪ್ರಾಣ ಬಿಟ್ಟಿದ್ದು ರಾಮ ಮಂದಿರಕ್ಕಾಗಿ. ಎಲ್ಲ ಅಡೆತಡೆಗಳನ್ನು ಮೀರಿ ಮೋದಿ ಅವರು ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಮಾಡಿದರು , ಮಹಿಳೆಯರಿಗೆ ಉಜ್ಜಲ್ ಯೋಜನೆ ಜಾರಿ ತಂದರು ,ದೇಶದಲ್ಲಿ ಆರ್ಥಿಕ ಸುಧಾರಣೆಯಾಗಿದೆ ಎಂದು ಹೇಳಿದ್ದರು .
ಮಾಜಿ ಶಾಸಕ ಅನಿಲ್ ಬೆನಕೆ ಮಾತನಾಡಿ, ಜಾತಿ– ಮತದ ವಿಷ ಬೀಜ ಬಿತ್ತುವ ಮೂಲಕ ಕಾಂಗ್ರೆಸ್ ಸಮಾಜ ಒಡೆಯುವ ಕೆಲಸ ಮಾಡುತ್ತಿದೆ. ಇದಕ್ಕೆ ಈ ಚುನಾವಣೆಯಲ್ಲಿ ಬುದ್ಧಿ ಕಲಿಸಬೇಕು ಕೋವಿಡ ಸಮಯದಲ್ಲಿ ನರೇಂದ್ರ ಮೋದಿಯವರು ವ್ಯಾಕ್ಸಿನೇಷನ್ ನೀಡಿ ಇಡೀ ಪ್ರಪಂಚಕ್ಕೆ ಭಾರತ ಶಕ್ತಿ ಏನುವುದು ತೋರಿಸಿ ಕೊಟ್ಟರು ,ವ್ಯಾಕ್ಸಿನೇಷನ್ ಕಾಂಗ್ರೆಸ್ ನವರು ಮನ ಬಂದಂತೆ ಟೀಕಿಸಿದ್ದರು ವಾಗ್ದಾಳಿ ನಡೆಸಿದ್ದರು .
ಗ್ರಾಮೀಣ ಮಂಡಳ ಅಧ್ಯಕ್ಷ ಧನಂಜಯ ಜಾಧವ್ ಮಾತನಾಡಿ ಸುರೇಶ ಅಂಗಡಿ ಹಾಗೂ ಜಗದೀಶ ಶೆಟ್ಟರ ತಮ್ಮ ಅಧಿಕಾರವಧಿಯಲ್ಲಿ ಹಲವಾರು ಯೋಜನೆಗಳ ಅನುಷ್ಠಾನದೊಂದಿಗೆ ಜಿಲ್ಲೆಗೆ ವಿಶೇಷ ಕೊಡುಗೆ ನೀಡಿದ್ದಾರೆ.. ನರೇಂದ್ರ ಮೋದಿಯಂತಹ ಧಿಮಂತ ನಾಯಕನ ಅವಶ್ಯಕತೆ ದೇಶಕ್ಕೆ ಇದೆ. ಜಮ್ಮು ಕಾಶ್ಮೀರದಲ್ಲಿ 370 ಕಲಂ ತೆಗೆದು ಹಾಕಿ, ರಾಮ ಮಂದಿರ ನಿರ್ಮಾಣ ಮಾಡಿ ದೇಶದಲ್ಲಿ ಶಾಂತತೆಯನ್ನು ನೆಲೆಸುವಂತೆ ಮಾಡಿದ್ದಾರೆ. ಬರುವ ದಿನಗಳಲ್ಲಿ ಒಂದು ದೇಶ ಒಂದು ಚುನಾವಣೆ ಹಾಗೂ ಎಲ್ಲರಿಗೂ ಒಂದೆ ಕಾನೂನು ಜಾರಿಗೊಳಿಸಿ ಪಿಓಕೆಯನ್ನು ವಶಪಡಿಸಿಕೊಳ್ಳಲು ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡಿ ಅಖಂಡ ಭಾರತ ನಿರ್ಮಿಸಲು ನಾವೆಲ್ಲ ಕಾರ್ಯಪ್ರವೃತ್ತರಾಗೋಣ ಎಂದರು
ಬಿಜೆಪಿ ಗ್ರಾಮೀಣ ಬೂತ್ ಮಟ್ಟದ ಸಮಾವೇಶದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ್ , ಚಿಕ್ಕ ರೇವಣ್ಣ, ಸೇರಿ ಹಲವು ಜನ ಮುಖಂಡರು ಇದ್ದರು.