ಬೆಳಗಾವಿ : ಕರಾವಳಿಗೆ ಹೈಕೋರ್ಟ್ ಪೀಠ ಬೇಕು ಎಂದು ಒತ್ತಾಯಿಸಿ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ನೇತೃತ್ವದ ಸರ್ವ ಪಕ್ಷಗಳ ಶಾಸಕರು ಮತ್ತು ಜನಪ್ರತಿನಿಧಿಗಳ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಅರ್ಪಿಸಿತು.
ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಒತ್ತಾಯಿಸಿ ವಕೀಲರ ಸಂಘ ಹಾಗೂ ಸರಕಾರದ ಮೇಲೆ ನಿರಂತರವಾಗಿ ಒತ್ತಡ ಹೇರುತ್ತಿದ್ದಾರೆ.
ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಮಧ್ಯವರ್ತಿ ಸ್ಥಳವಾಗಿರುವ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ ಯಾಗಬೇಕು ಎನ್ನುವುದು ಕರಾವಳಿ ಜನತೆಯ ಒಕ್ಕೊರಲ ಒತ್ತಾಸೆಯಾಗಿದೆ.