ಕಲಬುರಗಿ :
ಕಲಬುರಗಿಯಲ್ಲಿ ಬಿಜೆಪಿ ಶಾಸಕ ಬಸವರಾಜ ಮತ್ತಿಮೂಡ ಚಲಿಸುತ್ತಿದ್ದ ಕಾರು ಪಲ್ಟಿಯಾದ ಪರಿಣಾಮ ಶಾಸಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕಲಬುರಗಿ ಹೊರವಲಯದ ಪಾಳಾ ಗ್ರಾಮದ ಬಳಿ ಘಟನೆ ನಡೆದಿದೆ. ಶಾಸಕರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಕಲಬುರಗಿ ಗ್ರಾಮೀಣ ಕ್ಷೇತ್ರದ ಬಿಜೆಪಿ ಶಾಸಕ ಬಸವರಾಜ ಮತ್ತಿಮೂಡ ತಮ್ಮ ಫಾರ್ಚುನ‌ರ್ ಕಾರಿನಲ್ಲಿ ಕೆಲಸದ ನಿಮಿತ್ತ ತೆರಳುತ್ತಿದ್ದರು. ಪಾಳಾ ಗ್ರಾಮದ ಬಳಿಯ ರಸ್ತೆಯಲ್ಲಿ ಕಾರು ಪಲ್ಟಿಯಾಗಿದೆ.

ಆಕ್ಸಿಡೆಂಟ್ ಗೆ ಸರಿಯಾದ ಕಾರಣ ತಿಳಿದು ಬಂದಿಲ್ಲ. ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಕಾರು ಪಲ್ಟಿಯಾದ ಕೂಡಲೇ ಜನರು ಗಾಯಗೊಂಡಿರುವ ಶಾಸಕರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.

ಕಲಬುರಗಿ ಎಸ್ಪಿ ಅಷ್ಟೂರು ಶ್ರೀನಿವಾಸಲು ಆಸ್ಪತ್ರೆಗೆ ಭೇಟಿ ನೀಡಿ ಶಾಸಕರ ಆರೋಗ್ಯ ವಿಚಾರಣೆ ಮಾಡಿದ್ದಾರೆ. ಶಾಸಕರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಜೀವಕ್ಕೆ ಅಪಾಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.