ನವದೆಹಲಿ: ನರೇಂದ್ರ ಮೋದಿ ಅವರು ಸತತ ಮೂರನೇ ಅವಧಿಗೆ ದೇಶದ ಪ್ರಧಾನಿಯಾಗಿ ಇಂದು ರಾತ್ರಿ ಪ್ರಮಾಣವಚನ ಸ್ವೀಕರಿಸಲಿದ್ದು, ರಾಜ್ಯದ ಐವರಿಗೆ ಸಚಿವ ಸ್ಥಾನ ಖಾತ್ರಿಯಾಗಿದೆ. 72 ಜನ ಸಚಿವ ಸಂಪುಟ ಸೇರಲಿದ್ದಾರೆ

ರಾಜ್ಯಸಭೆಯಲ್ಲಿ ರಾಜ್ಯವನ್ನು ಪ್ರತಿನಿಧಿಸುವ ನಿರ್ಮಲಾ ಸೀತಾರಾಮನ್, ಧಾರವಾಡ ಸಂಸದ ಪಲ್ಲಾದ ಜೋಶಿ, ತುಮಕೂರು ಸಂಸದ ವಿ.ಸೋಮಣ್ಣ, ಬೆಂಗಳೂರು ಉತ್ತರ ಸಂಸದೆ ಶೋಭಾ ಕರಂದ್ಲಾಜೆ ಹಾಗೂ ಮಿತ್ರ ಪಕ್ಷವಾಗಿರುವ ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಮೋದಿ ಸಂಪುಟದಲ್ಲಿ ಸ್ಥಾನ ಕಲ್ಪಿಸಲಾಗಿದೆ.

ನಿರ್ಮಲಾ ಹಾಗೂ ಜೋಶಿ ಬ್ರಾಹ್ಮಣ, ಕುಮಾರಸ್ವಾಮಿ ಹಾಗೂ ಶೋಭಾ ಕರಂದ್ಲಾಜೆ ಒಕ್ಕಲಿಗ ಮತ್ತು ಸೋಮಣ್ಣ ಲಿಂಗಾಯತ ಸಮುದಾಯದವರು.

ರಾಷ್ಟ್ರಪತಿ ಭವನದಲ್ಲಿ ಇಂದು ರಾತ್ರಿ ನಡೆಯಲಿರುವ ಸಮಾರಂಭದಲ್ಲಿ ಮೋದಿ ಅವರು (ರಾತ್ರಿ 7.15ಕ್ಕೆ) ಪ್ರಮಾಣ ಸ್ವೀಕರಿಸಲಿದ್ದಾರೆ.