ನವದೆಹಲಿ: ಲೋಕಸಭೆ ಚುನಾವಣೆಯ ಎರಡನೇ ಹಂತದಲ್ಲಿ ಇಂದು ಮತದಾನ ನಡೆಯುತ್ತಿರುವ ಕ್ಷೇತ್ರಗಳಲ್ಲಿ ಪ್ರತಿಯೊಬ್ಬರೂ ದಾಖಲೆ ಸಂಖ್ಯೆಯಲ್ಲಿ ಭಾಗವಹಿಸುವಂತೆ ಪ್ರಧಾನಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ.

ಲೋಕಸಭಾ ಚುನಾವಣೆಯ ಎರಡನೇ ಹಂತದಲ್ಲಿ ರಾಜ್ಯದ 14 ಕ್ಷೇತ್ರಗಳು ಸೇರಿದಂತೆ ದೇಶದ 88 ಕ್ಷೇತ್ರಗಳಿಗೆ ಇಂದು ಮತದಾನ ನಡೆಯುತ್ತಿದೆ.

ಇಂದು ಮತದಾನ ನಡೆಯುತ್ತಿರುವ ಆಯಾ ರಾಜ್ಯಗಳ ಮತದಾರರಿಗೆ ಅಲ್ಲಿನ ಪ್ರಾದೇಶಿಕ ಭಾಷೆಗಳಲ್ಲಿ ಮತದಾನ ಮಾಡುವಂತೆ ಪ್ರಧಾನಿ ಮೋದಿ ಕರೆ ನೀಡಿದ್ದಾರೆ. ಇದರಂತೆ ಕರ್ನಾಟಕದ ಜನತೆಗೆ ಪ್ರಧಾನಿ ಮೋದಿ ಮತದಾನ ಮಾಡುವಂತೆ ಕನ್ನಡದಲ್ಲೇ ಪೋಸ್ಟ್ ಮಾಡಿದ್ದಾರೆ.

‘ಹೆಚ್ಚಿನ ಪ್ರಮಾಣದ ಮತದಾನವು ನಮ್ಮ ಪ್ರಜಾಪ್ರಭುತ್ವವನ್ನು ಬಲಪಡಿಸುತ್ತದೆ. ನಮ್ಮ ಯುವ ಮತದಾರರು ಮತ್ತು ಮಹಿಳಾ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ನಾನು ವಿಶೇಷವಾಗಿ ಕೋರುತ್ತೇನೆ. ನಿಮ್ಮ ಮತ ನಿಮ್ಮ ಧ್ವನಿ!’ ಎಂದು ಹೇಳಿದ್ದಾರೆ.