ನವದೆಹಲಿ: ಇನ್ಫೋಸಿಸ್ ಫೌಂಡೇಶನ್ ಸಂಸ್ಥಾಪಕಿ, ಕನ್ನಡತಿ ಡಾ.ಸುಧಾಮೂರ್ತಿ ಅವರನ್ನು ಕೇಂದ್ರ ಸರ್ಕಾರ ರಾಜ್ಯಸಭೆಗೆ ನಾಮ ನಿರ್ದೇಶನ ಮಾಡಿದ್ದು, ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಟ್ವಿಟ್ ಮೂಲಕ ಮಾಹಿತಿ ನೀಡಿದ್ದಾರೆ.

ಇನ್ಫೋಸಿಸ್ ಸಹ ಸಂಸ್ಥಾಪಕ ನಾರಾಯಣ ಮೂರ್ತಿ
ಅವರ ಪತ್ನಿ ಹಾಗೂ ಇನ್ಫೋಸಿಸ್ ಫೌಂಡೇಷನ್‌ನ ಮಾಜಿ
ಅಧ್ಯಕ್ಷ, ಸಮಾಜಸೇವಕಿ ಸುಧಾ ಮೂರ್ತಿ ಅವರನ್ನು
ಬಿಜೆಪಿಯಿಂದ ಅವರನ್ನು ರಾಜ್ಯಸಭೆಗೆ ನಾಮ ನಿರ್ದೇಶನ
ಮಾಡಲಾಗಿದೆ.
ಈ ಕುರಿತಾಗಿ ಪ್ರಧಾನಿ ನರೇಂದ್ರ ಮೋದಿ ಟ್ವಿಟ್ ಮಾಡಿದ್ದು, ‘ಭಾರತದ ರಾಷ್ಟ್ರಪತಿಗಳು ಶ್ರೀಮತಿ ಸುಧಾಮೂರ್ತಿ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿರುವುದು ನನಗೆ ಖುಷಿ ತಂದಿದೆ. ಸಮಾಜಸೇವೆ, ಲೋಕೋಪಕಾರ ಮತ್ತು ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಸುಧಾಜಿಯವರ ಕೊಡುಗೆ ಅಪಾರ ಮತ್ತು ಸ್ಫೂರ್ತಿದಾಯಕವಾಗಿದೆ. ರಾಜ್ಯಸಭೆಯಲ್ಲಿ ಅವರ ಉಪಸ್ಥಿತಿಯು ನಮ್ಮ ‘ನಾರಿ ಶಕ್ತಿ’ಗೆ ಪ್ರಬಲವಾದ ಸಾಕ್ಷಿಯಾಗಿದೆ. ಇದು ನಮ್ಮ ರಾಷ್ಟ್ರದ ಭವಿಷ್ಯ ರೂಪಿಸುವಲ್ಲಿ ಮಹಿಳೆಯರ ಶಕ್ತಿ ಮತ್ತು ಸಾಮರ್ಥ್ಯವನ್ನು ಉದಾಹರಿಸುತ್ತದೆ. ಅವರ ಸಂಸದೀಯ ಅವಧಿ ಫಲಪ್ರದವಾಗಲಿ ಎಂದು ಹಾರೈಸುತ್ತೇನೆ’ ಎಂದು ಮೋದಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.