ಬೆಳಗಾವಿ : ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್ 28 ರಂದು ಬೆಳಗಾವಿಗೆ ಆಗಮಿಸುವುದು ಬಹುತೇಕ ಫಿಕ್ಸ್ ಆಗಿದೆ.

ಅಂದು ಬೆಳಗಾವಿ ಮಹಾನಗರದಲ್ಲಿ ಬೆಳಗಾವಿ ಮತ್ತು ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಅವರು ಭರ್ಜರಿ ಚುನಾವಣಾ ಪ್ರಚಾರ ನಡೆಸಿ ಮತಯಾಚನೆ ಮಾಡುವ ಸಾಧ್ಯತೆ ಇದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ. ಮೋದಿ ಅವರ ಬೆಳಗಾವಿ ಭೇಟಿ ದಿನಾಂಕ ಇಷ್ಟರಲ್ಲೇ ಅಧಿಕೃತವಾಗಿ ಪ್ರಕಟವಾಗಬಹುದು ಎಂಬ ನಿರೀಕ್ಷೆ ಇದೆ.