ಮುಂಬಯಿ :
ಭಾರತದ ಅತಿ ಉದ್ದದ ಸಮುದ್ರ ಸೇತುವೆಯಾದ ಮುಂಬೈ ಟ್ರಾನ್ಸ್ ಹಾರ್ಬರ್ ಲಿಂಕ್ (MTHL) ಅಥವಾ ‘ಅಟಲ್ ಸೇತು’ವನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಉದ್ಘಾಟಿಸಿದರು.

21.8 ಕಿ.ಮೀ ಉದ್ದದ ಆರು ಪಥದ ಸೇತುವೆಯನ್ನು 18,000 ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಿಸಲಾಗಿದೆ. ಮುಂಬೈನ ಸೆಬ್ರಿ ಮತ್ತು ರಾಯಗಡ ಜಿಲ್ಲೆಯ ನವಾ ಶೇವಾ ಪ್ರದೇಶದ ನಡುವಿನ 21.8 ಕಿಲೋಮೀಟ‌ರ್ ಉದ್ದದ ಸೇತುವೆಯು ಪ್ರಸ್ತುತ ಎರಡು ಗಂಟೆಗಳಿಂದ ಸುಮಾರು 15-20 ನಿಮಿಷಗಳಿಗೆ ಪ್ರಯಾಣದ ಅವಧಿಯನ್ನು ಕಡಿಮೆ ಮಾಡಲಿದೆ.

ರಾಜ್ಯದ ಎರಡು ದೊಡ್ಡ ನಗರಗಳನ್ನು ಸಂಪರ್ಕಿಸುವ ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಗೆ MTHL ಮತ್ತಷ್ಟು ಸಂಪರ್ಕ ಕಲ್ಪಿಸುತ್ತದೆ. MTHL 6 ಲೇನ್ ಮಾರ್ಗ ಹೊಂದಿದೆ. ಸಮುದ್ರದ ಮೇಲೆ 16.50 ಕಿಲೋಮೀಟ‌ರ್ ಮತ್ತು ಭೂಮಿಯಲ್ಲಿ 5.50 ಕಿಲೋಮೀಟರ್ ಉದ್ದವನ್ನು ಹೊಂದಿದೆ. ಈ ಸೇತುವೆಗೆ ‘ ಅಟಲ್ ಬಿಹಾರಿ ವಾಜಪೇಯಿ ಸೇನ್ರಿ-ನವ ಶೇವಾ ಅಟಲ್ ಸೇತು’ ಎಂದು ಹೆಸರನ್ನು ಇಡಲಾಗಿದೆ.

ಈ ಸೇತುವೆ ಮೂಲಕ ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ, ಮುಂಬೈ-ಗೋವಾ ಎಕ್ಸ್‌ಪ್ರೆಸ್‌ವೇ, ವಿರಾ‌ರ್- ರಾಯ್‌ಘಡ‌ರ್ ಕಾರಿಡರ್ ಸಂಪರ್ಕ ಇನ್ನು ಮುಂದೆ ಸುಲಭವಾಗಲಿದೆ.