Join The Telegram | Join The WhatsApp |
ಬೆಂಗಳೂರು-
ಪ್ರಧಾನಿ ನರೇಂದ್ರ ಮೋದಿ ಅವರು 2023 ರ ಜನೇವರಿ 19 ರಂದು ಕರ್ನಾಟಕ ಮತ್ತು ಮಹಾರಾಷ್ಟ್ರಕ್ಕೆ ಭೇಟಿ ನೀಡಲಿದ್ದಾರೆ. ಜ.19ರಂದು ಕಲ್ಯಾಣ ಕರ್ನಾಟಕದಲ್ಲಿ ಪ್ರಧಾನಿ ಮೋದಿ ಪ್ರವಾಸ ಕೈಗೊಳ್ಳಲಿದ್ದಾರೆ. ಜ.19ರ ಬೆಳಗ್ಗೆ 11ಕ್ಕೆ ಕಲಬುರಗಿ ಏರ್ಪೋರ್ಟ್ಗೆ ಮೋದಿ ಆಗಮಿಸಲಿದ್ದು ಏರ್ಪೋರ್ಟ್ನಿಂದ ಯಾದಗಿರಿ ಜಿಲ್ಲೆಗೆ ತೆರಳಲಿದ್ದಾರೆ. ಬಳಿಕ ನಾರಾಯಣಪುರ ಎಡದಂಡೆ ಕಾಲುವೆ ಜಾಲದ ವಿಸ್ತರಣೆ ಮತ್ತು ನಾರಾಯಣಪುರ ಎಡದಂಡೆ ಕಾಲುವೆಯ ಆಧುನೀಕರಣ ಕಾಮಗಾರಿ ಲೋಕಾರ್ಪಣೆ ಮಾಡಲಿದ್ದಾರೆ. ಯಾದಗಿರಿ ಬಹುಗ್ರಾಮ ಕುಡಿಯುವ ನೀರು ಯೋಜನೆಗೆ ಶಂಕುಸ್ಥಾಪನೆ ಮಾಡಲಿದ್ದಾರೆ.
ಮಧ್ಯಾಹ್ನ 2:15 ರ ಸುಮಾರಿಗೆ ಕಲಬುರಗಿ ಜಿಲ್ಲೆಯ ಮಳಖೇಡ್‌ಗೆ ಆಗಮಿಸುವ ಪ್ರಧಾನಮಂತ್ರಿಯವರು ಅಲ್ಲಿ ಹೊಸದಾಗಿ ಘೋಷಣೆಯಾದ ಕಂದಾಯ ಗ್ರಾಮಗಳ ಅರ್ಹ ಫಲಾನುಭವಿಗಳಿಗೆ ಹಕ್ಕುಪತ್ರ (ಹಕ್ಕು ಪತ್ರ) ವಿತರಿಸುವರು ಮತ್ತು ರಾಷ್ಟ್ರೀಯ ಹೆದ್ದಾರಿ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸುವರು.
Join The Telegram | Join The WhatsApp |