ದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ಇಂದು ಅಧಿಕಾರ ವಹಿಸಿಕೊಂಡಿದ್ದಾರೆ. ಕರ್ನಾಟಕದಿಂದ ಜೆಡಿಎಸ್ ನಾಯಕ ಕುಮಾರಸ್ವಾಮಿ ಅವರು ಮೋದಿ ಸಂಪುಟ ಸೇರುವಲ್ಲಿ ಯಶಸ್ವಿಯಾಗಿರುವುದು ವಿಶೇಷ.

ರಾಜ್ಯಸಭೆಯಲ್ಲಿ ರಾಜ್ಯವನ್ನು ಪ್ರತಿನಿಧಿಸುವ ನಿರ್ಮಲಾ ಸೀತಾರಾಮನ್, ಧಾರವಾಡ ಸಂಸದ ಪ್ರಹ್ಲಾದ ಜೋಶಿ, ತುಮಕೂರು ಸಂಸದ ವಿ.ಸೋಮಣ್ಣ, ಬೆಂಗಳೂರು ಉತ್ತರ ಸಂಸದೆ ಶೋಭಾ ಕರಂದ್ಲಾಜೆ ಹಾಗೂ ಮಿತ್ರ ಪಕ್ಷವಾಗಿರುವ ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಮೋದಿ ಸಂಪುಟದಲ್ಲಿ ಸ್ಥಾನ ಕಲ್ಪಿಸಲಾಗಿದೆ.

ನಿರ್ಮಲಾ ಹಾಗೂ ಜೋಶಿ ಬ್ರಾಹ್ಮಣ, ಕುಮಾರಸ್ವಾಮಿ ಹಾಗೂ ಶೋಭಾ ಕರಂದ್ಲಾಜೆ ಒಕ್ಕಲಿಗ ಮತ್ತು ಸೋಮಣ್ಣ ಲಿಂಗಾಯತ ಸಮುದಾಯದವರು.

ರಾಷ್ಟ್ರಪತಿ ಭವನದಲ್ಲಿ ಇಂದು ರಾತ್ರಿ ನಡೆದ ಸಮಾರಂಭದಲ್ಲಿ ಮೋದಿ ಅವರು ಪ್ರಮಾಣ ವಚನ ಸ್ವೀಕರಿಸಿದರು.