ಒಡಿಶಾದ ನೂತನ ಮುಖ್ಯಮಂತ್ರಿಯಾಗಿ ಮೋಹನ್‌ ಚರಣ್ ಮಾಂಝಿ ಅವರು ಆಯ್ಕೆಯಾಗಿದ್ದು, ನಾಳೆ (ಬುಧವಾರ) ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ನಾಳೆ ಸಂಜೆ 5 ಗಂಟೆಗೆ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ರಾಜ್ಯ ಬಿಜೆಪಿ ಅಧ್ಯಕ್ಷ ಮನಮೋಹನ್ ಸಮಲ್, ಬ್ರಜರಾಜನಗ‌ರ್ ಶಾಸಕ ಸುರೇಶ್ ಪೂಜಾರಿ ಸೇರಿದಂತೆ ಕೆ.ವಿ.ಸಿಂಗ್ ದೇವ್ ಅವರು ಸಿಎಂ ರೇಸ್‌ನಲ್ಲಿದ್ದರು.  ಬಿಜೆಪಿ ಸರಳ ಬಹುಮತ ಸಾಧಿಸಿದೆ. ಮುಖ್ಯಮಂತ್ರಿ ಆಯ್ಕೆಗೆ ಸಂಬಂಧಿಸಿದಂತೆ ಇಂದು ಶಾಸಕಾಂಗ ಪಕ್ಷದ ಸಭೆ ನಡೆಸಲಾಗಿದೆ. ವೀಕ್ಷಕರಾಗಿ ರಾಜ್ಯಕ್ಕೆ ಬಂದಿದ್ದ ಕೇಂದ್ರ ಸಚಿವ ರಾಜನಾಥ್ ಸಿಂಗ್ ಹಾಗೂ ಭೂಪೇಂದ್ರ ಯಾದವ್ ಅವರು ನೂತನ ಮುಖ್ಯಮಂತ್ರಿ ಆಯ್ಕೆ ವಿಚಾರವಾಗಿ ಶಾಸಕರೊಂದಿಗೆ ಚರ್ಚೆ ನಡೆಸಿದ್ದರು. ಕೆ.ವಿ. ಸಿಂಗ್ ದೇವ್ ಮತ್ತು ಪಾರ್ವತಿ ಪರಿದಾ ಅವರನ್ನು ಉಪಮುಖ್ಯಮಂತ್ರಿಗಳನ್ನಾಗಿ ಆಯ್ಕೆ ಮಾಡಲಾಗಿದೆ.

ಭುವನೇಶ್ವರ: ಒಡಿಶಾದ ನೂತನ ಮುಖ್ಯಮಂತ್ರಿಯಾಗಿ ಮೋಹನ್‌ ಚರಣ್ ಮಾಂಝಿ ಅವರು ಆಯ್ಕೆಯಾಗಿದ್ದು, ನಾಳೆ (ಬುಧವಾರ) ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ನಾಳೆ ಸಂಜೆ 5 ಗಂಟೆಗೆ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ರಾಜ್ಯ ಬಿಜೆಪಿ ಅಧ್ಯಕ್ಷ ಮನಮೋಹನ್ ಸಮಲ್, ಬ್ರಜರಾಜನಗ‌ರ್ ಶಾಸಕ ಸುರೇಶ್ ಪೂಜಾರಿ ಸೇರಿದಂತೆ ಕೆ.ವಿ.ಸಿಂಗ್ ದೇವ್ ಅವರು ಸಿಎಂ ರೇಸ್‌ನಲ್ಲಿದ್ದರು. ಇವರು ಉಪ ಮುಖ್ಯಮಂತ್ರಿಗಳಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಒಡಿಶಾ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸರಳ ಬಹುಮತ ಸಾಧಿಸಿದೆ. ಮುಖ್ಯಮಂತ್ರಿ ಆಯ್ಕೆಗೆ ಸಂಬಂಧಿಸಿದಂತೆ ಇಂದು ಶಾಸಕಾಂಗ ಪಕ್ಷದ ಸಭೆ ನಡೆಸಲಾಗಿದೆ.

ವೀಕ್ಷಕರಾಗಿ ರಾಜ್ಯಕ್ಕೆ ಬಂದಿದ್ದ ಕೇಂದ್ರ ಸಚಿವ ರಾಜನಾಥ್ ಸಿಂಗ್ ಹಾಗೂ ಭೂಪೇಂದ್ರ ಯಾದವ್ ಅವರು ನೂತನ ಮುಖ್ಯಮಂತ್ರಿ ಆಯ್ಕೆ ವಿಚಾರವಾಗಿ ಶಾಸಕರೊಂದಿಗೆ ಚರ್ಚೆ ನಡೆಸಿದ್ದರು.