ಬೆಳಗಾವಿ: ಬೆಳಗಾವಿ ಲೋಕಸಭಾ ಮತಕ್ಷೇತ್ರದ ಘಟಪ್ರಭಾ ಚೆಕ್‌ ಪೋಸ್ಟ್ ನಲ್ಲಿ 1.70 ಲಕ್ಷ ರೂ. ದಾಖಲೆ ಇಲ್ಲದ ಹಣ ಮಂಗಳವಾರ ರಾತ್ರಿ ವಶಪಡಿಸಿಕೊಳ್ಳಲಾಗಿದೆ. ಅಕ್ರಮವಾಗಿ ದಾಖಲೆ ಇಲ್ಲದೆ ಹಣ ಸಾಗಾಟ ಮಾಡುವಾಗ ಘಟಪ್ರಭಾ ಚೆಕ್ ಪೋಸ್ಟ್ ನಲ್ಲಿ ಚುನಾವಣಾ ಅಧಿಕಾರಿಗಳು ಅಕ್ರಮ ಹಣ ವಶಪಡಿಸಿಕೊಂಡಿಸಿದ್ದಾರೆ. ಲೋಕಸಭಾ ಚುನಾವಣೆ ಹಿನ್ನೆಲೆ, ಚೆಕ್ ಪೋಸ್ಟ್ ಗಳಲ್ಲಿ ಬಿಗಿ ತಪಾಸಣೆ ಕೈಗೊಳ್ಳಲಾಗಿದೆ.