ಬೆಳಗಾವಿ : ಬೆಳಗಾವಿ ತಾಲೂಕಿನ ಕಿಣಿಯೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿ ಹಾಗೂ ಉಸಿರಾಟ ಸಮಸ್ಯೆಯಿಂದ ಮಗು ಮೃತಪಟ್ಟಿದೆ ಎಂದು ಸಂಬಂಧಿಕರು ಆರೋಪ ಮಾಡಿದ್ದಾರೆ.

ಸಂತಿಬಸ್ತವಾಡ ಗ್ರಾಮದ ಲಕ್ಷ್ಮೀ ಲಗಮಪ್ಪ ಹಳ್ಳಿ-28 ಇಂದು ಬೆಳಗಿನ ಜಾವ ಮೃತಪಟ್ಟಿದ್ದಾರೆ. ಮಗು ಉಸಿರಾಟ ಸಮಸ್ಯೆಯಿಂದ ಬಳಲುತ್ತಿತ್ತು. ಕೂಡಲೇ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾದರೂ ಮೃತಪಟ್ಟಿದೆ. ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ವೈದ್ಯರ ವಿರುದ್ಧ ಮೃತ ಮಹಿಳೆಯ ಪತಿ ದೂರು ದಾಖಲು ಮಾಡಿದ್ದಾರೆ.