ಶಹಾಬಾದ್ :
45 ವರ್ಷದ ತಾಯಿ ಮತ್ತು 22 ವರ್ಷದ ಮಗಳು ಒಂದೇ ಸೀರೆಯನ್ನು ಕಟ್ಟಿಕೊಂಡು ನದಿಗೆ ಹಾರಿ ಪ್ರಾಣ ಕಳೆದುಕೊಂಡಿದ್ದಾರೆ. ಮಾನಸಿಕ ವೇದನೆಯೇ ಸಾವಿಗೆ ಕಾರಣ ಎನ್ನಲಾಗಿದೆ.

ತಾಯಿ ಸುಮಲತಾ (45), ಹಾಗೂ ಮಗಳು ವರ್ಷಾ (22) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಗಳಾಗಿದ್ದಾರೆ. ಆತ್ಮಹತ್ಯೆ ಮಾಡಿಕೊಂಡ ತಾಯಿ- ಮಗಳು ಕಲಬುರಗಿಯ ಎಂ.ಬಿ.ನಗರ ಬಡಾವಣೆಯ ನಿವಾಸಿಗಳಾಗಿದ್ದಾರೆ ಎಂದು ಗೊತ್ತಾಗಿದೆ.
ಸೋಮವಾರ ಸಾಯಂಕಾಲದಿಂದ ನಾಪತ್ತೆಯಾಗಿದ್ದರು. ರಾತ್ರಿ ಕಾಗಿಣಾ ನದಿಗೆ ಹಾರಿ ಇಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಶಹಾಬಾದ್ ತಾಲೂಕಿನ ಕಾಗಿಣ ನದಿಗೆ ಹಾರಿ ಅವರು ಜೀವ ಕಳೆದುಕೊಂಡಿದ್ದು,
ನೀರಿಗೆ ಹಾರಿದ ಸಂದರ್ಭದಲ್ಲಿ ಯಾರಾದರೂ ಕೊನೆಯ ಹಂತದಲ್ಲಿ ಬದುಕಿಕೊಳ್ಳಲು ಪ್ರಯತ್ನ ನಡೆಸಬಾರದು ಎಂಬ ಕಾರಣಕ್ಕೆ ಈ ರೀತಿ ಕಟ್ಟಿಕೊಂಡಿದ್ದಾರೆ ಎನ್ನಲಾಗಿದೆ.

ಶಹಬಾದ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಈ ತಾಯಿ ಮಗಳು ಯಾವುದೇ ಮಾನಸಿಕ ವೇದನೆಯಿಂದ ಈ ಕೃತ್ಯ ನಡೆಸಿರಬಹುದು ಎಂದು ಶಂಕಿಸಲಾಗಿದೆ. ಪೊಲೀಸರು ಅವರ ಕುಟುಂಬಿಕರನ್ನು ಈ ನಿಟ್ಟಿನಲ್ಲಿ ವಿಚಾರಣೆ ನಡೆಸುತ್ತಿದ್ದಾರೆ.