Join The Telegram | Join The WhatsApp |
ಬೆಂಗಳೂರು :
ಸಂಸದೆ ಸುಮಲತಾ ಅಂಬರೀಶ್ ಅವರ ಆಪ್ತ ಇಂಡುವಾಳು ಸಚ್ಚಿದಾನಂದ ಅವರು ಸೋಮವಾರ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
ಸಚ್ಚಿದಾನಂದ ಅವರು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ಕ್ಷೇತ್ರದ ಟಿಕೆಟ್ ಆಕಾಂಕ್ಷಿ. ಅವರ ಜತೆಗೆ ನಾಗಮಂಗಲ ರವಿ, ಶ್ರೀರಂಗ ಪಟ್ಟಣ ಲಿಂಗಾರಾಜು ಬಿಜೆಪಿಗೆ ಸೇರ್ಪಡೆಯಾದರು. ಪಕ್ಷದ ಬಾವುಟ ಹಾಗೂ ಶಾಲು ಹೊದಿಸಿ ಸಚಿವರಾದ ಸಿ.ಎನ್.ಅಶ್ವತ್ಥ ನಾರಾಯಣ, ನಾರಾಯಣಗೌಡ, ಗೋಪಾಲಯ್ಯ ಮತ್ತು ಸಿ.ಪಿ.ಯೋಗೀಶ್ವರ, ಬಿಜೆಪಿ ಉಪಾಧ್ಯಕ್ಷ ನಿರ್ಮಲಕುಮಾರ ಸುರಾನಾ ಪಕ್ಷಕ್ಕೆ ಬರಮಾಡಿಕೊಂಡರು.
ಪಕ್ಷ ಸೇರ್ಪಡೆಯಾದ ಬಳಿಕ ಮಾತನಾಡಿದ ಸಚ್ಚಿದಾನಂದ ಅವರು, ಪ್ರಧಾನಿ ನರೇಂದ್ರ ಮೋದಿಯ ನಾಯಕತ್ವವನ್ನು ಒಪ್ಪಿ ನಾನು ಬಿಜೆಪಿ ಸೇರಿದ್ದೇನೆ. ವಿಧಾನಸಭೆಗೆ ಮಂಡ್ಯದಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಿ ಕಳುಹಿಸಿ ಕೊಡುತ್ತೇವೆ ಎಂದರು.
Join The Telegram | Join The WhatsApp |