ಚೆನ್ನೈ : ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದ ತಮಿಳುನಾಡಿನ ಹಾಲಿ ಸಂಸದ ಎ.ಗಣೇಶ ಮೂರ್ತಿ-76 ಅವರು ನಿಧನರಾಗಿದ್ದಾರೆ. ಎಂಡಿಎಂಕೆ ನಾಯಕರಾಗಿರುವ ಅವರಿಗೆ ಈ ಸಲ ಪಕ್ಷ ಟಿಕೆಟ್ ನಿರಾಕರಿಸಿತ್ತು. ಇದರಿಂದ ಮನನೊಂದು ಆತ್ಮಹತ್ಯೆಗೆ ಪ್ರಯತ್ನಿಸಿದ್ದರು.

2019ರ ಲೋಕಸಭೆ ಚುನಾವಣೆಯಲ್ಲಿ ಈರೋಡ್ ಕ್ಷೇತ್ರದಲ್ಲಿ ಡಿಎಂಕೆ ಮೈತ್ರಿಕೂಟದ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸಂಸದರಾಗಿದ್ದರು.
2024ರ ಚುನಾವಣೆಯಲ್ಲಿ ಟಿಕೆಟ್ ಸಿಗುವ ನಿರೀಕ್ಷೆಯಲ್ಲಿದ್ದರು ಆದರೆ ಪಕ್ಷ ಯಾವುದೇ ಇತರ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳದ ಹಿನ್ನೆಲೆಯಲ್ಲಿ ಸ್ವತಂತ್ರವಾಗಿ ಸ್ಪರ್ಧೆಗೆ ಇಳಿದಿದೆ. ಇದರಿಂದ ಗಣೇಶ್ ಅವರು ಟಿಕೆಟ್ ವಂಚಿತರಾಗಿದ್ದರು. ಇದರಿಂದ ಹತಾಶೆಗೊಳಗಾದ ಅವರು ಮಾರ್ಚ್ 24 ರಂದು ಆತ್ಮಹತ್ಯೆಗೆ ಯತ್ನಿಸಿದ್ದರು

ಕೊಯಮತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಗುರುವಾರ ಬೆಳಗಿನ ಜಾವ ಐದು ಗಂಟೆ ಸುಮಾರಿಗೆ ಹೃದಯಘಾತದಿಂದ ಮೃತಪಟ್ಟಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.