![ದೆಹಲಿ ಚುನಾವಣಾ ಪ್ರಚಾರದ ಅಖಾಡದಲ್ಲಿ ಮೃಣಾಲ್ ಹೆಬ್ಬಾಳಕರ್ ದೆಹಲಿ ಚುನಾವಣಾ ಪ್ರಚಾರದ ಅಖಾಡದಲ್ಲಿ ಮೃಣಾಲ್ ಹೆಬ್ಬಾಳಕರ್](https://udayaprabha.com/wp-content/uploads/2025/01/IMG-20250129-WA0008-scaled.jpg)
ನವದೆಹಲಿ: ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ್ ದೆಹಲಿ ಚುನಾವಣಾ ಪ್ರಚಾರಕ್ಕೆ ಧುಮುಕಿದ್ದಾರೆ.
ದೆಹಲಿಯ ಕಸ್ತೂರಬಾ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಎಐಸಿಸಿ ಕಾರ್ಯದರ್ಶಿ ಅಭಿಷೇಕ್ ದತ್ ಪರವಾಗಿ ಮಂಗಳವಾರ ಮೃಣಾಲ್ ಹೆಬ್ಬಾಳಕರ್ ಮತಯಾಚನೆ ಮಾಡಿದರು.
ಚುನಾವಣಾ ರೂಪುರೇಷೆಗಳು ಸೇರಿದಂತೆ ಅನುಸರಿಸಬೇಕಾದ ರಣತಂತ್ರಗಳ ಕುರಿತು ಚರ್ಚಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕದ ಸಚಿವ ಡಾ.ಎಂ.ಸಿ.ಸುಧಾಕರ್, ಅಭ್ಯರ್ಥಿ ಅಭಿಷೇಕ್ ದತ್ತ್, ಕರ್ನಾಟಕ ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯಾ ರೆಡ್ಡಿ, ಪಂಜಾಬ್ ರಾಜ್ಯದ ಬರನಾಳ ಶಾಸಕ ಕುಲದೀಪ್ ಸಿಂಗ್ ದಿಲ್ಲೊನ್, ರಾಷ್ಟ್ರೀಯ ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಶ್ರೀನಿವಾಸ್ ಬಿ.ವಿ ಮತ್ತು ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.