ಬೆಳಗಾವಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್ ಹೆಬ್ಬಾಳಕರ್ ಅವರು ಇಂದು ಬೆಳಗ್ಗೆ ತಮ್ಮ ನಾಮಪತ್ರ ಸಲ್ಲಿಸಲಿದ್ದಾರೆ.
ಅದಕ್ಕೂ ಪೂರ್ವ 8.30ರಿಂದ 9.30ರ ವರೆಗೆ ಬೆಳಗಾವಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಬಹಳಷ್ಟು ಮಠಾಧೀಶರು ಮನೆಗೆ ಆಗಮಿಸುತ್ತಿದ್ದು ಮೃಣಾಲ್ ಹೆಬ್ಬಾಳಕರ್ ಅವರಿಗೆ ಆಶಿರ್ವಾದ ಮಾಡಲಿದ್ದಾರೆ. ಈ ಸಂದರ್ಭದಲ್ಲಿ
ಸ್ವಾಮೀಜಿಗಳ ಪಾದಪೂಜೆ ನಡೆಯಲಿದೆ. 9.30ಕ್ಕೆ ಹಿಂಡಲಗಾ ಗಣಪತಿ ದೇವಸ್ಥಾನದಲ್ಲಿ ಪೂಜೆ ನಡೆಯಲಿದೆ. 10.45ಕ್ಕೆ ನಾಮಪತ್ರ ಸಲ್ಲಿಕೆ,11 ಗಂಟೆಗೆ ರ್ಯಾಲಿ ಆರಂಭವಾಗಲಿದೆ..
ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮೃಣಾಲ ಹೆಬ್ಬಾಳಕರ್ ಇಂದು (ಸೋಮವಾರ) ನಾಮಪತ್ರ ಸಲ್ಲಿಸಲಿದ್ದಾರೆ.
ಬೆಳಗ್ಗೆ ಸುಳೇಬಾವಿ ಮಹಾಲಕ್ಷ್ಮೀ ದೇವಸ್ಥಾನ ಮತ್ತು ಹಿಂಡಲಗಾ ಗಣಪತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಬಳಿಕ 11 ಗಂಟೆಗೆ ಸಿಪಿಎಡ್ ಮೈದಾನದಿಂದ ಮೆರವಣಿಗೆಯಲ್ಲಿ ಆಗಮಿಸಿ ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸುವರು.
ಉಪಮುಖ್ಯಮಂತ್ರಿಗಳೂ ಆಗಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಮೃಣಾಲ ಹೆಬ್ಬಾಳಕರ್ ನಾಮಪತ್ರ ಸಲ್ಲಿಸುವ ವೇಳೆ ಹಾಜರಿರಲಿದ್ದಾರೆ. ಭಾನುವಾರ ರಾತ್ರಿ ಮೈಸೂರಿನಿಂದ ವಿಶೇಷ ವಿಮಾನದ ಮೂಲಕ ಬೆಳಗಾವಿಗೆ ಆಗಮಿಸಿರುವ ಶಿವಕುಮಾರ, ನಾಮಪತ್ರ ಸಲ್ಲಿಕೆಯಲ್ಲಿ ಭಾಗವಹಿಸಲಿದ್ದಾರೆ.
ಮೃಣಾಲ ಹೆಬ್ಬಾಳಕರ್ ನಾಮಪತ್ರ ಸಲ್ಲಿಕೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೇರಿದಂತೆ ಜಿಲ್ಲೆಯ ಶಾಸಕರು, ಮುಖಂಡರು, ರಾಜ್ಯದ ಇನ್ನೂ ಕೆಲವು ನಾಯಕರು ಸಹ ಪಾಲ್ಗೊಳ್ಳಲಿದ್ದಾರೆ.